ಬೆಂಗಳೂರು: ತಹಶೀಲ್ದಾರ್, ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಅರೆ ನ್ಯಾಯಿಕ ಅಧಿಕಾರಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವ ಸಂಬಂಧ ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೋವಿಡ್ ಕಾರಣದಿಂದ ಕಳೆದ ಒಂದು ವರ್ಷದಿಂದ ವಿಚಾರಣೆಗಳು ಸ್ಥಗಿತಗೊಂಡಿವೆ. ಹೀಗಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಇದು ಸಕಾಲ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.

ತಹಶೀಲ್ದಾರ್, ಉಪವಿಭಾಗಾಧಿಕಾರಿ, ಜಿಲ್ಲಾಧಿಕಾರಿ ಮತ್ತು ಪ್ರಾದೇಶಿಕ ಆಯುಕ್ತರ ನ್ಯಾಯಾಲಯಗಳಲ್ಲಿ ವಿಚಾರಣೆಗಳ ಬಾಕಿ ಉಳಿದುಕೊಂಡಿವೆ. ಹಂತ–ಹಂತವಾಗಿ ವಿಡಿಯೊ ಕಾನ್ಫರೆನ್ಸ್ ಆರಂಭಿಸುವುದು ಸೂಕ್ತ ಎಂದು ಹೇಳಿತು.

ಕೋವಿಡ್ ಮೂರನೇ ಅಲೆ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸಿದ್ಧರಾಗಿರಬೇಕಾಗುತ್ತದೆ. ವಿಡಿಯೊ ಕಾನ್ಫರೆನ್ಸ್ಗೆ ಬೇಕಾದ ಸಲಭ್ಯ ಒದಗಿಸುವ ಬಗ್ಗೆ ಮಾಹಿತಿ ಸಲ್ಲಿಸುವಂತೆ ತಿಳಿಸಿದ ಪೀಠ, ವಿಚಾರಣೆಯನ್ನು ಜುಲೈ13ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.