ಬೆಂಗಳೂರು: 2017ನೇ ಸಾಲಿನ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ದ್ರುವರಾಜ್ ವೆಂಕಟರಾವ್ ಮುತಾಲಿಕ್ ದೇಸಾಯಿ,2018ನೇ ಸಾಲಿನ ಇದೇ ಪ್ರಶಸ್ತಿಗೆ ಮೈಸೂರಿನ ಡಿ.ಮಹಾದೇವಪ್ಪ ಆಯ್ಕೆಯಾಗಿದ್ದಾರೆ.

ಕನ್ನಡ ದಿನಪತ್ರಿಕೆ ಹುಟ್ಟುಹಾಕಿ ಬೆಳೆಸಿದವರಿಗೆ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ತುಮಕೂರಿನ ಎಸ್.ನಾಗಣ್ಣ (2017), ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯು.ಪಿ.ಶಿವಾನಂದ (2018) ಭಾಜನರಾಗಿದ್ದಾರೆ.

ತಲಾ ₹2 ಲಕ್ಷ ನಗದು, ಸ್ಮರಣಿಕೆಯನ್ನು ಈ ಪ್ರಶಸ್ತಿ ಒಳಗೊಂಡಿದೆ. ನಿವೃತ್ತ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಇವರನ್ನು ಆಯ್ಕೆಮಾಡಿದೆ.2016ನೇ ಸಾಲಿನ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿರಿಯ ಪತ್ರಕರ್ತ ನಾಗೇಶ್ ಹೆಗಡೆ, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಗಂಗಾಧರ ಹಿರೇಗುತ್ತಿ ಅವರಿಗೂ ತಲಾ ₹2 ಲಕ್ಷ ನಗದು ಒಳಗೊಂಡ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರದಾನ ಮಾಡುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.