ಬೆಂಗಳೂರು: ‘ಜೆಡಿಎಸ್ಗೆ ಬಿಟ್ಟುಕೊಟ್ಟಿರುವ ತುಮಕೂರು ಲೋಕಸಭಾ ಕ್ಷೇತ್ರವನ್ನು ವಾಪಸು ಪಡೆಯುವ ಸಂಬಂಧ ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇನೆ’ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.

‘ರಾಜ್ಯದ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಸದರಿದ್ದಾರೆ. ಈ ಕ್ಷೇತ್ರಗಳ ಅಭ್ಯರ್ಥಿ ಬದಲಿಸುವುದು ಬೇಡ ಎಂದು ತೀರ್ಮಾನಿಸಲಾಗಿತ್ತು. ಆದರೆ, ತುಮಕೂರು ಕ್ಷೇತ್ರ ಬಿಟ್ಟುಕೊಟ್ಟಾಗ ಅಸಮಾಧಾನ ಆಗಿತ್ತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ಪರಿಸ್ಥಿತಿ ಇದೆ. ಈ ವಿಷಯವನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ’ ಎಂದರು.

‘ಜೆಡಿಎಸ್ ವರಿಷ್ಠ ದೇವೇಗೌಡರು ಮತ್ತು ಎಚ್.ಡಿ. ಕುಮಾರಸ್ವಾಮಿ ಅವರಲ್ಲೂ ಮನವಿ ಮಾಡಿದ್ದೇನೆ. ಅವರಿಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಕ್ಷೇತ್ರದಲ್ಲಿ ದೇವೇಗೌಡರೇ ಕಣಕ್ಕಿಳಿಯುವುದಾರೆ ಸ್ವಾಗತ’ ಎಂದರು.

‘ಕ್ಷೇತ್ರ ಹಂಚಿಕೆಯಲ್ಲಿ ಪರಮೇಶ್ವರ ಅವರ ಪ್ರಶ್ನೆ ಬರುವುದಿಲ್ಲ. ಮೈತ್ರಿ ಮುಂದುವರೆಯಬೇಕು. ಹೊಂದಾಣಿಕೆಯಲ್ಲಿ ಪ್ರಾಮಾಣಿಕತೆ ತೋರಿದರೆ ಗೆಲ್ಲಲು ಸಾಧ್ಯ. ಸುಲಭವಾಗಿ ಗೆಲ್ಲುವ ಸೀಟುಗಳನ್ನು ಬುದ್ದಿವಂತಿಕೆಯಿಂದ ಹಂಚಿಕೊಳ್ಳಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.