ಬೆಂಗಳೂರು: ತುಂಗಭದ್ರಾ ಜಲಾಶಯದ 19ನೇ ಗೇಟ್ ತುಂಡಾದ ಘಟನೆ ಕುರಿತಂತೆ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಚರ್ಚೆ ನಡೆಸಿದರು. ಮುಖ್ಯಮಂತ್ರಿ ಜಲಾಶಯಕ್ಕೆ ಮಂಗಳವಾರ (ಆಗಸ್ಟ್ 13) ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಜೊತೆಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿ, ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಿದರು.

ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಜೊತೆಗೂ ಮುಖ್ಯಮಂತ್ರಿ ಚರ್ಚೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.