ಬೆಂಗಳೂರು: ದಾವಣಗೆರೆಯ ಯುಬಿಡಿಟಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನೀಡುತ್ತಿರುವ ಶೇ 50 ‘ಪೇಮೆಂಟ್ ಕೋಟಾ’ವನ್ನು ರದ್ದು ಮಾಡುವಂತೆ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರಿಗೆ ವಿದ್ಯಾರ್ಥಿಗಳು ಮನವಿ ಮಾಡಿದರು.

ಐಡಿಎಸ್ಒ ನೇತೃತ್ವದಲ್ಲಿ ಸಚಿವರನ್ನು ಶುಕ್ರವಾರ ಭೇಟಿ ಮಾಡಿದ ವಿದ್ಯಾರ್ಥಿಗಳು, ಈ ಶೈಕ್ಷಣಿಕ ವರ್ಷದ ಪ್ರಥಮ ಸೆಮಿಸ್ಟರ್ ಎಂಜನಿಯರಿಂಗ್ನ 504 ಸೀಟುಗಳಲ್ಲಿ 252 ಸೀಟುಗಳನ್ನು ₹97 ಸಾವಿರಕ್ಕೆ ಮಾರಾಟ ಮಾಡಲಾಗುತ್ತಿದೆ. ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸೀಟುಗಳನ್ನು ಕಸಿಯಲಾಗಿದೆ ಎಂದು ದೂರಿದರು.

ಉಳಿದ 252 ಸೀಟುಗಳನ್ನು ಅರ್ಹತಾ ಪಟ್ಟಿ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತಿದೆ. ಅದಕ್ಕೂ ₹43 ಸಾವಿರ ಶುಲ್ಕ ನಿಗದಿ ಮಾಡಲಾಗಿದೆ. ದುಬಾರಿ ಶುಲ್ಕದ ಕಾರಣ ಕೆಲ ಪ್ರತಿಭಾವಂತರು ಪ್ರವೇಶ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಮನವಿ ಸ್ವೀಕರಿಸಿದ ಸಚಿವ ಸುಧಾಕರ್, ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಹಾಂತೇಶ ಬಿಳೂರ್, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಪೂಜಾ ನಂದಿಹಳ್ಳಿ, ಯುಬಿಡಿಟಿ ಉಳಿಸಿ ವಿದ್ಯಾರ್ಥಿಗಳ ಹೋರಾಟ ಸಮಿತಿಯ ಮುಖಂಡರಾದ ಟಿ.ಎಸ್. ಸುಮನ್, ಅಖಿಲೇಶ್, ಅಭಿಷೇಕ್, ಆದರ್ಶ, ಸಂತೋಷ್, ಚೇತತ್, ರೋಹಿತ್ ಮನವಿ ಪತ್ರ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.