ಬೆಳಗಾವಿ:ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ಕೇಂದ್ರದ ಉಡಾನ್ ಯೋಜನೆಯಲ್ಲಿ10ರಿಂದ 15 ವಿಮಾನಗಳ ಹಾರಾಟ ಸೇವೆ ಆರಂಭವಾಗಲಿದೆ ಎಂದು ಕೇಂದ್ರ ವಿಮಾನಯಾನ ರಾಜ್ಯ ಸಚಿವ ಜಯಂತ್ ಸಿನ್ಹಾ ಎಂದು ತಿಳಿಸಿದರು.

ಭಾನುವಾರ ಬೆಳಗ್ಗೆ ಸಾಂಬ್ರಾ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಅನೇಕ ವಿಮಾನಯಾನ ಸಂಸ್ಥೆಗಳು ಬೆಳಗಾವಿ ವಿಮಾನ ನಿಲ್ದಾಣದ ಮೂಲಕ ತಮ್ಮ ವಿಮಾನ ಹಾರಾಟ ಸೇವೆ ಆರಂಭಿಸಲು ಆಸಕ್ತಿ ತೋರಿಸಿವೆ ಎಂದರು.

ಸಂಸದ ಸುರೇಶ ಅಂಗಡಿ ಮಾತನಾಡಿ ಬೆಳಗಾವಿಯಿಂದಕಾರ್ಗೋ ವಿಮಾನಗಳ ಸೇವೆಯನ್ನು ಮತ್ತು ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ಸೇವೆಯನ್ನು ಆರಂಭಿಸುವಂತೆಸಚಿವರಲ್ಲಿ ಮನವಿ ಮಾಡಿದರು. ಜೊತೆಗೆ ಬೆಳಗಾವಿಯಲ್ಲಿ ವಿಮಾನ ಹಾರಾಟ ತರಬೇತಿ ನೀಡುವ ಶಾಲೆ ಆರಂಭಿಸಬೇಕು ಎಂದು ಕೋರಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಆದಷ್ಟು ಬೇಗನೆ ಈ ಕುರಿತು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.