ಬ್ರಹ್ಮಾವರ (ಉಡುಪಿ): ಕೊರೊನಾ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳಿಂದ, ತಮಗೂಸೋಂಕು ತಗುಲಿರಬಹುದು ಎಂದು ಹೆದರಿ ಬ್ರಹ್ಮಾವರದ ಉಪ್ಪೂರು ನರ್ನಾಡಿನ ಗೋಪಾಲಕೃಷ್ಣ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು, ಕೊರೊನಾ ಶಂಕೆಯ ಭೀತಿಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ.

ಮೃತ ವ್ಯಕ್ತಿ ಮಧ್ಯರಾತ್ರಿವರೆಗೂ ಕುಟುಂಬದ ಸದ್ಯಸರ ಬಳಿ ಕೊರೊನಾ ಹರಡುತ್ತಿರುವ ಆತಂಕದ ವಿಚಾರವಾಗಿ ಮಾತನಾಡಿ, ಬೆಳಗಿನ ಜಾವ ಮನೆಯ ಹಿಂಬದಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶವವನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ನಿರೀಕ್ಷೆಯಲ್ಲಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಪಾಲಕೃಷ್ಣ ಈಚೆಗೆ ವಾಟ್ಸ್‌ಆ್ಯಪ್ ಹಾಗೂ ಜಾಲತಾಣಗಳಲ್ಲಿ ಬರುತ್ತಿದ್ದ ಕೊರೊನಾ ಸಂಬಂಧಿತ ಸುದ್ದಿಗಳನ್ನು ಅತಿಯಾಗಿ ನೋಡಿ ಮಾನಸಿಕ ಒತ್ತಡಕ್ಕೆ ಸಿಲುಕಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತ ವ್ಯಕ್ತಿಯಲ್ಲಿ ಸೋಂಕು ಲಕ್ಷಣಗಳು ಇರಲಿಲ್ಲ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿ ಕೆಎಸ್‌ಆರ್‌ಟಿಸಿ ನೌಕರನಾಗಿದ್ದು ಚಾಲಕರಿಗೆ ತರಬೇತಿ ನೀಡುತ್ತಿದ್ದರು ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್‌ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.