ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್ಎಲ್ಯು) ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಐದು ಮತ್ತು ಮೂರು ವರ್ಷದ ಕಾನೂನು ಪದವಿಯ ಸೆಮಿಸ್ಟರ್ ಪರೀಕ್ಷೆ ನಡೆಸಲು ವಿಶ್ವವಿದ್ಯಾಲಯಕ್ಕೆ ಹಸಿರು ನಿಶಾನೆ ತೋರಿಸಿರುವ ಹೈಕೋರ್ಟ್, ಬುಧವಾರ ಈ ಕುರಿತು ಮಧ್ಯಂತರ ಆದೇಶ ಹೊರಡಿಸಿದೆ.

ಪರೀಕ್ಷೆಗಳಿಗೆಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ಕೋರ್ಟ್ ಅನುಮತಿ ಇಲ್ಲದೇ ಪರೀಕ್ಷಾ ಫಲಿತಾಂಶ ಪ್ರಕಟಿಸಬಾರದು’ ಎಂದು ನಿರ್ದೇಶಿಸಿದೆ.

ವಿದ್ಯಾರ್ಥಿ ಎಚ್.ಸಿ. ನವೀನ್ ಕುಮಾರ್ ಸೇರಿದಂತೆ ಒಂಬತ್ತು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು 2022ರ ಮಾರ್ಚ್ 7ಕ್ಕೆ ಮುಂದೂಡಿದೆ.

ವಿಶ್ವವಿದ್ಯಾಲಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಉದಯ ಹೊಳ್ಳ ಅವರು, ‘ಭಾರತೀಯ ವಕೀಲ ಪರಿಷತ್ ನಿರ್ದೇಶನದ ಅನುಸಾರವೇ ಕೆಎಸ್ಎಲ್ಯು ಪರೀಕ್ಷೆ ನಡೆಸಬೇಕಿದೆ’ ಎಂದು ಹೇಳಿದರು. ಈ ಮಾತನ್ನು ಪರಿಗಣಿಸಿದ ನ್ಯಾಯಪೀಠ,ಪರೀಕ್ಷೆ ನಡೆಸಲು ಅನುಮತಿ ನೀಡಿ ಆದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.