ಬೆಂಗಳೂರು: ಬೆಳಗಾವಿ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದ್ದಾರೆ.

'ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗಲೆಲ್ಲ ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರಂಟಿ' ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

2013ರಿಂದ 2018ರ ಅವಧಿಯಲ್ಲಿ ಮತ್ತು 2023ರ ನಂತರ ಅಧಿಕಾರಿಗಳಿಗೆ ನೀಡಿರುವ ಕಿರುಕುಳ, ಆತ್ಮಹತ್ಯೆ, ಅನುಮಾನಾಸ್ಪದ ಸಾವು ಮತ್ತು ನೌಕರಿಗೆ ರಾಜೀನಾಮೆ ನೀಡಿರುವ ಹಲವು ಪ್ರಕರಣಗಳ ಕುರಿತು ಆರ್.ಅಶೋಕ ಪಟ್ಟಿ ಮಾಡಿದ್ದಾರೆ.

'ಸಿಎಂ ಸಿದ್ದರಾಮಯ್ಯ ಅವರೇ, ತಮ್ಮ ಭ್ರಷ್ಟಾಚಾರದ ದಾಹ ತೀರಲು ಇನ್ನೆಷ್ಟು ಪ್ರಮಾಣಿಕ ಅಧಿಕಾರಿಗಳ ಬಲಿ ಆಗಬೇಕು' ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಈ ಮೊದಲು ರುದ್ರಣ್ಣ ಅವರ ಆತ್ಮಹತ್ಯೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ವರ್ಗಾವಣೆ ದಂಧೆಯೇ ಕಾರಣ ಎಂಬ ಅನುಮಾನವಿದ್ದು, ಅವರನ್ನು ಸಂಪುಟದಿಂದ ವಜಾ ಮಾಡಿ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆರ್.ಅಶೋಕ ಆಗ್ರಹಿಸಿದ್ದರು.
.ತಹಶೀಲ್ದಾರ್ ಕಚೇರಿ ಸಿಬ್ಬಂದಿ ಆತ್ಮಹತ್ಯೆ ಪ್ರಕರಣ: ಹೆಬ್ಬಾಳಕರ ರಾಜೀನಾಮೆಗೆ ಆಗ್ರಹ.ಬೆಳಗಾವಿ | ಕಿರುಕುಳ ಆರೋಪ; ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.