ಮಂಗಳವಾರ, 24 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ರಾಜೀನಾಮೆಗೆ ಕೇಂದ್ರ ಸಚಿವರ ಆಗ್ರಹ

ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಪ್ರಲ್ಹಾದ ಜೋಶಿ ಅವರಿಂದ ದೆಹಲಿಯಲ್ಲಿ ಪ್ರತ್ಯೇಕ ಸುದ್ದಿಗೋಷ್ಠಿ
Published : 24 ಸೆಪ್ಟೆಂಬರ್ 2024, 13:07 IST
Last Updated : 24 ಸೆಪ್ಟೆಂಬರ್ 2024, 13:07 IST
ಫಾಲೋ ಮಾಡಿ
Comments

ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ರಿಟ್‌ ಅರ್ಜಿ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವರು ಆಗ್ರಹಿಸಿದರು. 

ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಈ ಒತ್ತಾಯ ಮಾಡಿದರು.

––

ಕಾಂಗ್ರೆಸ್ ಪಕ್ಷದ ಡಿಎನ್ಎಯಲ್ಲೇ ಭ್ರಷ್ಟಾಚಾರ ಇದೆ. ಸಿದ್ದರಾಮಯ್ಯ ಅವರು ಇದಕ್ಕೆ ಹೊರತಾಗಿಲ್ಲ. ನಿಯಮಗಳನ್ನು ಗಾಳಿಗೆ ತೂರಿ ಅವರು ಅಧಿಕಾರ ದುರುಪಯೋಗ ಮಾಡಿದ್ದಾರೆ. ಇಡೀ ದೇಶಕ್ಕೆ ರಾಹುಲ್‌ ಗಾಂಧಿ ಅವರು ನೈತಿಕತೆಯ ನಕಲಿ ಪಾಠ ಹೇಳುತ್ತಾರೆ. ನೈತಿಕತೆ ಕಳೆದುಕೊಂಡಿರುವ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ರಾಹುಲ್ ಸೂಚಿಸಬೇಕು. 

–ಪ್ರಲ್ಹಾದ ಜೋಶಿ, ಕೇಂದ್ರ ಆಹಾರ ಸಚಿವ

–––

ತಮ್ಮ ಜೀವನ ತೆರೆದ ಪುಸ್ತಕ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳಿಕೆ ನೀಡಿದ್ದಾರೆ. ಆ ಪುಸ್ತಕ ಈಗ ಎಲ್ಲಿ ಕಳೆದು ಹೋಗಿದೆ ಎಂಬುದು ಗೊತ್ತಿಲ್ಲ. ಹೈಕೋರ್ಟ್ ಆದೇಶ ಗೌರವಿಸಿ ಹಾಗೂ ಪ್ರಕರಣದ ಗಾಂಭೀರ್ಯತೆ ಗಮನಿಸಿ ಅವರು ಕೂಡಲೇ ರಾಜೀನಾಮೆ ನೀಡಬೇಕು. ತಪ್ಪು ಮಾಡುವುದು ಸಹಜ. ಅದನ್ನು ತಿದ್ದಿಕೊಳ್ಳಬೇಕು. 

–ವಿ.ಸೋಮಣ್ಣ, ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ

–––

ದಲಿತರ ಜಮೀನನ್ನು ಪಡೆದು ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ. ಜತೆಗೆ, ಸಾಂವಿಧಾನಿಕ ಹುದ್ದೆಯಲ್ಲಿದ್ದು ಪತ್ನಿ ಹೆಸರಿನಲ್ಲಿ 14 ನಿವೇಶನಗಳನ್ನು ಪಡೆದಿದ್ದಾರೆ. ರಾಜ್ಯಪಾಲರ ವಿರುದ್ಧ ರಾಜಕೀಯ ಪ್ರೇರಿತ ದುರುದ್ದೇಶದ ಆರೋಪ ಮಾಡಿರುವ ಅವರು ಹುದ್ದೆಯಲ್ಲಿ ಯಾವುದೇ ಕಾರಣಕ್ಕೂ ಮುಂದುವರಿಯಬಾರದು. 

–ಶೋಭಾ ಕರಂದ್ಲಾಜೆ, ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT