ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೇ 75ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಅತಿಥಿ ಪ್ರಾಧ್ಯಾಪಕರನ್ನು ಅವಲಂಬಿಸಿವೆ.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅತಿ ಹೆಚ್ಚು ಹುದ್ದೆಗಳು ಖಾಲಿ ಇವೆ. ಮಂಜೂರಾದ 460 ಬೋಧಕ ಹುದ್ದೆಗಳಲ್ಲಿ 407 ಹುದ್ದೆಗಳು ಭರ್ತಿಯಾಗಿಲ್ಲ. ಇದರ ನಂತರ, ಕರ್ನಾಟಕ ವಿಶ್ವವಿದ್ಯಾಲಯದ 600 ಹುದ್ದೆಗಳಲ್ಲಿ 386, ಬೆಂಗಳೂರು ವಿಶ್ವವಿದ್ಯಾನಿಲಯದ 365 ಹುದ್ದೆಗಳಲ್ಲಿ 213 ಖಾಲಿ ಇವೆ.

ಈಚೆಗೆ ಸ್ಥಾಪಿತವಾದ ಕೆಲ ವಿಶ್ವವಿದ್ಯಾಲಯಗಳಲ್ಲಿ ಒಂದು ಹುದ್ದೆಯೂ ಭರ್ತಿಯಾಗಿಲ್ಲ. ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯಕ್ಕೆ ಮಂಜೂರಾದ 15 ಬೋಧಕ ಹುದ್ದೆಗಳೂ ಖಾಲಿ ಉಳಿದಿವೆ. ಡಾ.ಬಿ.ಆರ್.ಅಂಬೇಡ್ಕರ್ ನ್ಯಾಷನಲ್ ಸ್ಕೂಲ್ ಆಫ್ ಎಕನಾಮಿಕ್ಸ್ 17, ರಾಯಚೂರು ವಿಶ್ವವಿದ್ಯಾಲಯದಲ್ಲಿ 31 ಹುದ್ದೆಗಳು ಭರ್ತಿಯಾಗಿಲ್ಲ.

ಜೆಡಿಎಸ್ನ ಮರಿತಿಬ್ಬೇಗೌಡ ಪ್ರಶ್ನೆಗೆ ವಿಧಾನ ಪರಿಷತ್ನಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ನೀಡಿದ ಉತ್ತರದಲ್ಲಿ ಈ ಮಾಹಿತಿ ಇದ್ದು, ಖಾಲಿ ಹುದ್ದೆಗಳಿಂದಾಗಿ ಶಿಕ್ಷಣದ ಗುಣಮಟ್ಟಕ್ಕೆ ತೊಂದರೆಯಾಗಿಲ್ಲ. ಅನುಭವಿ ಅತಿಥಿ ಪ್ರಾಧ್ಯಾಪಕರನ್ನು ಬಳಸಿಕೊಳ್ಳಲಾಗುತ್ತಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.