ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ನೇಮಕ

Published 4 ಜುಲೈ 2024, 14:10 IST
Last Updated 4 ಜುಲೈ 2024, 14:10 IST
ಅಕ್ಷರ ಗಾತ್ರ

ಬೆಂಗಳೂರು: ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ರಾಜ್ಯದ ನೂತನ ಉಪ ಲೋಕಾಯುಕ್ತರನ್ನಾಗಿ ನೇಮಿಸಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಉಪ ಲೋಕಾಯುಕ್ತರ ಎರಡು ಹುದ್ದೆಗಳಿವೆ. ಅದರಲ್ಲಿ ಒಂದು ಹುದ್ದೆ ಖಾಲಿ ಇತ್ತು. ಎರಡನೇ ಉಪ ಲೋಕಾಯುಕ್ತರ ಹುದ್ದೆಗೆ ವೀರಪ್ಪ ಅವರನ್ನು ನೇಮಿಸಿದ್ದು, ಅವರ ಅಧಿಕಾರದ ಅವಧಿಯು ಐದು ವರ್ಷಗಳವರೆಗೆ ಇದೆ.

ಎರಡನೇ ಉಪ ಲೋಕಾಯುಕ್ತರ ಹುದ್ದೆ ಭರ್ತಿ ಕುರಿತು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಅವರೊಂದಿಗೆ ಸಮಾಲೋಚನೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವೀರಪ್ಪ ಅವರನ್ನು ನೇಮಿಸುವಂತೆ ಜೂನ್‌ 24ರಂದು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನವರಾದ ವೀರಪ್ಪ, 2023ರ ಮೇ ತಿಂಗಳಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT