ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಫರೀದ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಸೂಚಿಸಿದರು. ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನುಮೋದಿಸಿದರು.

ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ಸರ್ವಾನುಮತದಿಂದ ಆಯ್ಕೆಯಾದರು.

ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಅವರ ಆದೇಶ ಅನುಸಾರ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪೀಕರ್ ಪೀಠ ಬಳಿಗೆ ಯುಟಿ ಖಾದರ್ ಅವರನ್ನು ಕರೆತಂದರು. ಬಳಿಕ ಶುಭಾಶಯ ಕೋರಲಾಯ್ತು.

ಬಳಿಕ ಸಿದ್ದರಾಮಯ್ಯ ಹಾಗೂ ಬಸವರಾಜ ಬೊಮ್ಮಾಯಿ ಅವರು ಅಭಿನಂದನಾ ಭಾಷಣ ಮಾಡಿ, ನೂತನ ಸ್ಪೀಕರ್ಗೆ ಶುಭಾಶಯ ಕೋರಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೂತನ ಸಚಿವರನ್ನು ಸದನಕ್ಕೆ ಪರಿಚಯ ಮಾಡಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.