ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಆಗಿರುವ ಅನ್ಯಾಯ ನಿವಾರಣೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಉಪ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಮಂಡಿಸಲು ಉತ್ತರ ಕರ್ನಾಟಕದ ಕಾಂಗ್ರೆಸ್ ಶಾಸಕರು ತೀರ್ಮಾನಿಸಿದ್ದಾರೆ.

ಗುರುವಾರ ಶಾಸಕರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ, ಎಸ್.ಆರ್.ಪಾಟೀಲ ಮತ್ತು ಇತರ ಶಾಸಕರು ಈ ಸಂಬಂಧ ಚರ್ಚೆ ನಡೆಸಿದರು.

ವಿಧಾನಪರಿಷತ್ ಸಭಾಪತಿ ಸ್ಥಾನವನ್ನೂ ಉತ್ತರಕರ್ನಾಟಕ ಭಾಗದ ಎಸ್.ಆರ್.ಪಾಟೀಲ ಅವರಿಗೆ ಕೊಡದೇ ವಂಚಿಸಲಾಗಿದೆ. ಪಕ್ಷ ಮತ್ತು ಸರ್ಕಾರದಲ್ಲಿ ಎಲ್ಲ ಪ್ರಮುಖ ಹುದ್ದೆಗಳೂ ದಕ್ಷಿಣ ಕರ್ನಾಟಕದವರ ಪಾಲಾಗಿದೆ. ಇದರಿಂದ ಉತ್ತರ ಕರ್ನಾಟಕದ ಶಾಸಕರಿಗೆ ಅನ್ಯಾಯವಾಗಿದೆ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.