ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮದ ಹಗರಣ: ಮುಖ್ಯಮಂತ್ರಿ ಸ್ಪಷ್ಟೀಕರಣಕ್ಕೆ ಸಂಸದ ಬೊಮ್ಮಾಯಿ ಆಗ್ರಹ

ವಾಲ್ಮೀಕಿ ನಿಗಮದ ₹40 ಕೋಟಿ ಹಣ ಖಜಾನೆಯಿಂದ ನೇರವಾಗಿ ಬೇರೆ ಖಾತೆಗಳಿಗೆ ವರ್ಗಾವಣೆ ಆರೋಪ
Published 22 ಜುಲೈ 2024, 8:07 IST
Last Updated 22 ಜುಲೈ 2024, 8:07 IST
ಅಕ್ಷರ ಗಾತ್ರ

ನವದೆಹಲಿ: ವಾಲ್ಮೀಕಿ ನಿಗಮಕ್ಕೆ ಸಂಬಂಧಿಸಿದ ಸುಮಾರು ₹40 ಕೋಟಿ ಹಣ ನೇರವಾಗಿ ರಾಜ್ಯ ಸರ್ಕಾರದ ಖಜಾನೆಯಿಂದ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಸೋಮವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದ ಆಳ‌ ಮತ್ತು ಅಗಲ ನೋಡಿದರೆ ಹೊಸ ತಿರುವುಗಳಿಗೆ ಕಾರಣವಾಗುತ್ತಿದೆ. ಇದಕ್ಕೆ ಅಂತ್ಯವೇ ಇಲ್ಲ ಅಂತ ಅನಿಸುತ್ತದೆ. ಈಗಾಗಲೇ ಹಲವಾರು ಖಾತೆಗಳನ್ನು ತೆರೆದು ಹೈದರಾಬಾದ್ ಗೆ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಆದರೆ, ಅದು ಹಣಕಾಸು ಇಲಾಖೆಗೆ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಆದರೆ, ವಾಸ್ತವಾಂಶ ಬೇರೆ ಇದೆ’ ಎಂದರು.

‘ಮಾರ್ಚ್ 31 ರಂದು ನೇರವಾಗಿಯೇ ರಾಜ್ಯ ಸರ್ಕಾರದ ಖಜಾನೆಯಿಂದ ಸುಮಾರು ₹40 ಕೋಟಿ ಅಧಿಕೃತ ಖಾತೆಗೆ ಹೋಗದೇ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿದೆ ಎಂಬ ಮಾಹಿತಿ ಇದೆ. ಇದು ಹೇಗೆ ಹೊರಗೆ ಬಂದಿದೆ ಎಂದರೆ, ಪಾವತಿ ಮಾಡಿರುವ ಚಲನ್ ಅನ್ನು ಕಂಪ್ಯೂಟರ್‌ನಿಂದ ತೆಗೆದುಹಾಕುವ ಪಯತ್ನವಾಗಿದೆ. ಆ ಹಿನ್ನೆಲೆಯಲ್ಲಿ ಖಜಾನೆಯಲ್ಲಿ ಸ್ವಲ್ಪ ಗಲಿಬಿಲಿಯಾಗಿದೆ. ಹೀಗಾಗಿ ಈ ವಿಷಯ ಹೊರಗೆ ಬಂದಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ವಿಧಾನಸಭೆಯಲ್ಲಿ ಸ್ಪಷ್ಟಿಕರಣ ನೀಡಬೇಕು. ಪಾಲ್ಮೀಕಿ ನಿಗಮಕ್ಕೆ ಎಷ್ಟು ಹಣ ಬಿಡುಗಡೆಯಾಗಿದೆ. ಮಾರ್ಚ್ 31 ಕೈ ಖಜಾನೆಯಿಂದ ಹಣ ಬಿಡುಗಡೆಯಾಗಿದೆಯಾ, ಬಿಡುಗಡೆಯಾಗಿದ್ದರೆ ಯಾವ ಖಾತೆಗೆ ಬಿಡುಗಡೆಯಾಗಿದೆ. ಚಲನ್ ನಾಶ ಮಾಡುವ ಪ್ರಯತ್ನ ನಡೆದಿದೆಯೋ ಇಲ್ಲವೋ ಎನ್ನುವ ಬಗ್ಗೆ ಸ್ಪಷ್ಟಿಕರಣ ನೀಡಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT