ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ₹95 ಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎನ್ನಲಾದ ಹಗರಣದ ಆರೋಪಿಯಾಗಿ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಯಲ್ಲಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ‘ಯ ವಿಶೇಷ ನ್ಯಾಯಾಲಯದ (ಸಿಸಿಎಚ್-82) ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಬೆಳಗ್ಗೆ 11.30ಕ್ಕೆ ಹಾಜರುಪಡಿಸಲಾಯಿತು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ಹಾಜರಾದ ಇ.ಡಿ ವಕೀಲ ಪಿ.ಪ್ರಸನ್ನ ಕುಮಾರ್ ಅವರು, ಪ್ರಕರಣದ ಮತ್ತೊಬ್ಬ ಆರೋಪಿಯಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಹೈದರಾಬಾದ್ನ ಸತ್ಯನಾರಾಯಣ ವರ್ಮ ಅವರನ್ನು ಬಾಡಿ ವಾರಂಟ್ ಮುಖಾಂತರ ವಶಕ್ಕೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದರು.

ಈ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಆರೋಪಿ ಸತ್ಯನಾರಾಯಣ ವರ್ಮ ಅವರನ್ನು ಮಂಗಳವಾರ (ಜುಲೈ 23) ಕೋರ್ಟ್ಗೆ ಹಾಜರುಪಡಿಸುವಂತೆ ಆದೇಶಿಸಿದರು. ಅಂತೆಯೇ, ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ತುಂಬತೋಳಿನ ಬಿಳಿ ಅಂಗಿ ಧರಿಸಿದ್ದ ನಾಗೇಂದ್ರ ಅವರು ಕೋರ್ಟ್ ಹಾಲ್ನಲ್ಲಿ ಕುತ್ತಿಗೆ ಕೆಳಗೆ ಬಿಚ್ಚಿದ್ದ ಅಂಗಿಯ ಗುಂಡಿಗಳನ್ನು ಹಾಕಿಕೊಂಡರು. ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಆದೇಶ ಪೂರ್ಣಗೊಳಿಸುತ್ತಿದ್ದಂತೆಯೇ ಅವರ ಮುಖದ ಮೇಲೆ ಚಿಂತೆಯ ಗೆರೆಗಳು ಹಾದುಹೋದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.