ಬೆಂಗಳೂರು: ‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಆರೋಪಿಯಾಗಿಸಲು ಒತ್ತಡ ಹೇರುತ್ತಿದ್ದಾರೆ’ ಎಂದು ದೂರಿ ಜಾರಿ ನಿರ್ದೇಶನಾಲಯದ (ಇ.ಡಿ) ಇಬ್ಬರು ಅಧಿಕಾರಿಗಳ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಕಲ್ಲೇಶ್ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಇ.ಡಿ ಉಪ ನಿರ್ದೇಶಕ ಮನೋಜ್ ಮಿತ್ತಲ್ ಮತ್ತು ಸಹಾಯಕ ನಿರ್ದೇಶಕ ಮುರಳಿ ಕಣ್ಣನ್ ಈ ಕುರಿತಂತೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಆದೇಶಿಸಿದೆ.

‘ದೂರನ್ನು ಮುಂದುವರೆಸಲು ಇಚ್ಚಿಸುವುದಿಲ್ಲ’ ಎಂದು ದೂರುದಾರ ಬಿ.ಕಲ್ಲೇಶ್ ಸಲ್ಲಿಸಿದ ಮೆಮೊ ಅನ್ನು ನ್ಯಾಯಪೀಠ ಪರಿಗಣಿಸಿದೆ ಎಂದು ಆದೇಶದಲ್ಲಿ ತಿಳಿಸಿದೆ.

‘ಈ ಅಧಿಕಾರಿಗಳು ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಿದ್ದಾರೆ. ಹಾಗಾಗಿ, ಕರ್ತವ್ಯ ನಿರ್ವಹಣೆ ವೇಳೆ ಅವರ ವಿರುದ್ಧ ಎಫ್ಐಆರ್ ದಾಖಲಿಸುತ್ತಾ ಹೋದರೆ, ಯಾವುದೇ ಅಧಿಕಾರಿ ಕರ್ತವ್ಯ ನಿರ್ವಹಿಸಲಾಗದು. ಅಧಿಕಾರಿಗಳ ವಿರುದ್ಧದ ಎಫ್ಐಆರ್ ತನಿಖೆಗೆ ಅನುಮತಿ ನೀಡಿದರೆ, ಅದು ಕಾನೂನು ದುರ್ಬಳಕೆಯಾಗಲಿದೆ’ ಎಂದು ಪೀಠ ಹೇಳಿತು.

ಪ್ರಕರಣವೇನು?: ‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹95 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಆರೋಪಿಯನ್ನಾಗಿಸಲು ನನ್ನ ಮೇಲೆ ಒತ್ತಡ ಹೇರಲಾಗಿದೆ’ ಎಂದು ಆರೋಪಿಸಿ ಬಿ.ಕಲ್ಲೇಶ್ ಇ.ಡಿ ಅಧಿಕಾರಿಗಳ ವಿರುದ್ಧ ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು.

ಅಧಿಕಾರಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023ರ (ಬಿಎನ್ಎಸ್) ಕಲಂ 3(5) (ಉದ್ದೇಶ ಪೂರ್ವಕ), 351 (2) (ಕ್ರಿಮಿನಲ್ ಬೆದರಿಕೆ), ಮತ್ತು 352 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.