ಶುಕ್ರವಾರ, 5 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ಮನೆಗೆ ಬಿಜೆಪಿ ಮುತ್ತಿಗೆ ಯತ್ನ: ವಿಜಯೇಂದ್ರ, ಅಶೋಕ ವಶಕ್ಕೆ, ಬಿಡುಗಡೆ

Published 3 ಜುಲೈ 2024, 7:37 IST
Last Updated 3 ಜುಲೈ 2024, 7:37 IST
ಅಕ್ಷರ ಗಾತ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಮತ್ತು ಮೈಸೂರಿನ ಮೂಡಾ ಅವ್ಯವಹಾರ ಖಂಡಿಸಿ ಸಿಎಂ ಮನೆಗೆ ಮುತ್ತಿಗೆ ಹಾಕಲು ಕುಮಾರಕೃಪಾ ವಸತಿ ಗೃಹದಿಂದ ಹೊರಟ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂಡ್ರೆ ಸೇರಿದಂತೆ ಹಲವು ಜನಪ್ರತಿನಿಧಿಗಳನ್ನು ಪೊಲೀಸರು ವಶಕ್ಕೆ ಪಡೆದರು.

ವಿಜಯೇಂದ್ರ ಹಾಗೂ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ನೇತೃತ್ವದಲ್ಲಿ ಬೆಳಿಗ್ಗೆ ಕುಮಾರಕೃಪಾ ವಸತಿ ಗೃಹದಿಂದ ಕಾಲ್ನಡಿಗೆ ಮೂಲಕ ಹೊರಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಲಾಗಿತ್ತು. ಪಾದಯಾತ್ರೆ ಮೂಲಕ ಎಲ್ಲರೂ ಮುಂದುವರಿಯುತ್ತಿದ್ದಂತೆ ತಡೆದ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದರು.

ಇದೇ ವೇಳೆ ಬಿಜೆಪಿ ಮುಖಂಡರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಮಾತಿನ ಚಕಮಕಿಯೂ ನಡೆಯಿತು. ಹಲವು ಜನಪ್ರತಿನಿಧಿಗಳನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT