ನವದೆಹಲಿ: ಕರ್ನಾಟಕದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.

ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಸೋಮವಾರ ಕನ್ನಡದಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಅನೇಕ ಕ್ಷೇತ್ರಗಳಲ್ಲಿ ಕರ್ನಾಟಕ ಉನ್ನತ ಸಾಧನೆ ಮಾಡಿದೆ. ಐಟಿ– ಬಿಟಿ ಕ್ಷೇತ್ರಗಳಲ್ಲಂತೂ ರಾಜ್ಯವು ಜಗತ್ತಿನ ಗಮನ ಸೆಳೆದಿದೆ. ಈ ನಡುವೆ, ರಾಜ್ಯ ಸರ್ಕಾರದಲ್ಲಿ ಹಲವು ಆಡಳಿತಾತ್ಮಕ ಸಮಸ್ಯೆಗಳು ಸೃಷ್ಟಿಯಾಗಿವೆ. ಅಭಿವೃದ್ಧಿ ನಿರ್ಲಕ್ಷ್ಯದ ಜತೆಗೆ ಹಲವು ಸಮಸ್ಯೆಗಳು ಇವೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿ ಅವ್ಯವಹಾರ ಆಗಿರುವುದು ಇದಕ್ಕೆ ಸಾಕ್ಷಿ’ ಎಂದರು.

‘ಈ ನಿಗಮದ ಖಜಾನೆಯ ಮೂಲಕವೇ ₹187 ಕೋಟಿಯು ಬೇನಾಮಿ ಖಾತೆಗಳಿಗೆ ಜಮಾ ಆಗಿದೆ. ಇದು ಜನರ ತೆರಿಗೆ ಹಣ. ಈ ಹಣ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕೆ ಬಳಕೆಯಾಗಬೇಕಿತ್ತು. ಅದರ ಬದಲು ಬೇನಾಮಿ ಖಾತೆಗಳಿಗೆ ವರ್ಗಾವಣೆಯಾಗಿ ದುರುಪಯೋಗ ಆಗಿದೆ. ಇದನ್ನು ಸರ್ಕಾರ ಸಹ ಒಪ್ಪಿದೆ. ಈ ಬಗ್ಗೆ ಕಠಿಣ ಕ್ರಮ ಆಗಬೇಕು’ ಎಂದು ಅವರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.