ಬೆಂಗಳೂರು: ‘ವಾಣಿ ವಿಲಾಸ (ವಿವಿ) ಸಾಗರ ಜಲಾಶಯದ ಸುರಕ್ಷತೆ ಬಗ್ಗೆ ಯಾವುದೇ ಆತಂಕ ಅಗತ್ಯ ಇಲ್ಲ’ ಎಂದುಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳಸ್ಪಷ್ಟಪಡಿಸಿದ್ದಾರೆ.

‘ವಾಣಿವಿಲಾಸ ಸಾಗರ ಜಲಾಶಯಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಜ್ಞರ ಸಮಿತಿ ಗುರುವಾರ (ಸೆ.8) ಭೇಟಿ ನೀಡಿ ಸಮಗ್ರವಾಗಿ ಪರಿಶೀಲಿಸಿದೆ. ಅಲ್ಲದೆ, ಅಣೆಕಟ್ಟೆಯ ಯಾವುದೇ ಭಾಗದಲ್ಲಿ ನೀರು ಸೋರುವಿಕೆ ಇಲ್ಲ. ಸುರಕ್ಷತೆಗೂ ತೊಂದರೆ ಇಲ್ಲವೆಂದು ವರದಿ ನೀಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

‘ಅಣೆಕಟ್ಟೆಯ ಗರಿಷ್ಠ ಮಟ್ಟ 142 ಅಡಿ. ಪ್ರಸ್ತುತ ನೀರಿನ ಸಂಗ್ರಹ 135 ಅಡಿ ಇರುವುದಾಗಿ ಅಣೆಕಟ್ಟೆಗೆ ಭೇಟಿ ನೀಡಿರುವ ತಜ್ಞರು ತಿಳಿಸಿದ್ದಾರೆಂದು ಭದ್ರಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಎಂಜಿನಿಯರ್ ವರದಿ ಸಲ್ಲಿಸಿದ್ದಾರೆ. ಹೀಗಾಗಿ ಯಾವುದೇ ಆತಂಕಕ್ಕೆ ಕಾರಣವಿಲ್ಲ’ ಎಂದೂ ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.