ವಿಜಯಪುರ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಲಾ ವಿಭಾಗ(ಕನ್ನಡ ಮಾಧ್ಯಮ)ದಲ್ಲಿ ವಿಜಯಪುರ ನಗರದ ಎಸ್.ಎಸ್. ಪಿ.ಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಜ್ಞಾನೋಬಾ ನಾವಿ 596 ಅಂಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಲಬೀಳಗಿ ಗ್ರಾಮದವರಾದ ವೇದಾಂತ ನಾವಿ ವಿಜಯಪುರ ನಗರದ ಶಾಸ್ತ್ರಿನಗರದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಇದ್ದುಕೊಂಡು ಎಸ್.ಎಸ್. ಪಿಯು ಕಾಲೇಜಿನಲ್ಲಿ ಓದಿದರು.

‘ರಾಜ್ಯಕ್ಕೆ ಪ್ರಥಮ ಬರುತ್ತೇನೆ ಎಂಬ ನಿರೀಕ್ಷೆ ಇರಲಿಲ್ಲ, ಖುಷಿಯಾಗಿದೆ. ಓದಿಗಾಗಿ ಹೆಚ್ಚು ಸಮಯ ಮೀಸಲಿಟ್ಟಿರಲಿಲ್ಲ. ಅವಕಾಶ ಸಿಕ್ಕಾಗ ಓದುತ್ತಿದ್ದೆ. ಯಾವುದೇ ಟ್ಯೂಷನ್‌ಗೆ ಹೋಗಿಲ್ಲ, ಪ್ರತಿ ದಿನ ಕಾಲೇಜಿನಲ್ಲಿ ಮಾಡುವ ಪಾಠಗಳನ್ನು ಅಂದಂದೆ ಓದಿಕೊಳ್ಳುತ್ತಿದ್ದೆ’ ಎಂದು ವೇದಾಂತ ತಿಳಿಸಿದರು.

‘ಪದವಿ ಓದಿದ ಬಳಿಕ ಐಎಎಸ್, ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಆದ್ಯತೆ ನೀಡುತ್ತೇನೆ’ ಎಂದು ಹೇಳಿದರು.

‘ಕ್ಷೌರಿಕ ಕೆಲಸ ಮಾಡುತ್ತಿದ್ದ ತಂದೆ ಕೋವಿಡ್ ಸಂದರ್ಭದಲ್ಲಿ ತೀರಿಕೊಂಡ ಪರಿಣಾಮ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಒಳಗಾಯಿತು. ಬಡತನದಲ್ಲೇ ತಾಯಿ, ಅಕ್ಕ ನೀಡಿದ ಸಹಕಾರ ಹಾಗೂ ಕಾಲೇಜಿನ ಉಪನ್ಯಾಸಕರ ಮಾರ್ಗದರ್ಶನದಿಂದ ಹೆಚ್ಚು ಅಂಕಗಳಿಸಲು ಸಹಾಯವಾಯಿತು’ ಎಂದು ವೇದಾಂತ ತಿಳಿಸಿದರು.

ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವೇದಾಂತ ನಾವಿ ಅವರನ್ನು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲ್ ಅವರು ಸಿಹಿ ತಿನ್ನಿಸಿ, ಸನ್ಮಾನಿಸಿ ಶುಭ ಹಾರೈಸಿದರು.

ಕಲಬೀಳಗಿಯ ಬಂಜಾರ ವಿದ್ಯಾ ವರ್ದಕ ಸಂಘದ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದಿರುವ ವೇದಾಂತ ನಾವಿ ಶೇ 96.96 ರಷ್ಟು ಅಂಕಗಳಿಸಿ, ಉತ್ತಮ ಸಾಧನೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.