ಬೆಂಗಳೂರು: ‘ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸದೇ ಇರುವ ಹಾಗೂ ನಿಗದಿತ ನಮೂನೆಯಲ್ಲಿ ನಂಬರ್ ಪ್ಲೇಟ್ ಇರದ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ, ತಕ್ಕ ಕ್ರಮ ಕೈಗೊಳ್ಳಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ವಕೀಲ ಕೆ. ಬಿ. ವಿಜಯಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ವಕೀಲ ವಿ.ಶ್ರೀನಿಧಿ, ‘2019ರ ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ಅವಧಿಯಲ್ಲಿ 1,71,157 ವಾಹನಗಳನ್ನು ಪರಿಶೀಲಿಸಿ,‘ಎಚ್‌ಎಸ್‌ಆರ್‌ಪಿ’ (ಗರಿಷ್ಠ ಭದ್ರತೆಯ ನೋಂದಣಿ ಫಲಕ) ಅಳವಡಿಸದೇ ಇರುವ ವಾಹನಗಳ ವಿರುದ್ಧ 6,207 ಪ್ರಕರಣ ದಾಖಲಿಸಲಾಗಿದೆ. 2018ರಿಂದ 2019ರ ಆಗಸ್ಟ್‌ವರೆಗೆ₹4.6 ಕೋಟಿ ಸಂಗ್ರಹಿಸಲಾಗಿದೆ’ ಎಂದು ವಿವರಿಸಿದರು.

ಇದಕ್ಕೆ ನ್ಯಾಯಪೀಠ, ನಿಗದಿತ ಮಾದರಿಯಲ್ಲಿ ನಂಬರ್ ಪ್ಲೇಟ್ ಹೊಂದಿರದ ಖಾಸಗಿ ಹಾಗೂ ವಾಣಿಜ್ಯ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.