ಬೆಂಗಳೂರು:ಜೂನ್ 7ರಿಂದ 11ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಈಗಾಗಲೇ ಚಿತ್ರದುರ್ಗ ಪ್ರವೇಶಿಸಿದೆ. 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಆವರಿಸಲಿದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ತಿಳಿಸಿದರು.

ಮಹಾರಾಷ್ಟ್ರದ ದಕ್ಷಿಣ ಕರಾವಳಿಯಿಂದ, ಕೇರಳದ ಉತ್ತರ ಕರಾವಳಿಯವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಜೂನ್ 8ರಂದು ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಇದೆಲ್ಲದರ ಒಟ್ಟಾರೆ ಪರಿಣಾಮ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಲಿದೆ ಎಂದು ಅವರು ತಿಳಿಸಿದರು.

ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಈ ಪ್ರದೇಶದ ಜನರು ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.