ಶಿರಸಿ: ‘ಎನ್.ಡಿ.ಎ. ಅಧಿಕಾರಾವಧಿಯಲ್ಲಿ ದೇಶದ ಉನ್ನತ ಹುದ್ದೆಗಳನ್ನು ಉತ್ತರ ಭಾರತದವರಿಗೆ ನೀಡಲಾಗಿದೆ. ದಕ್ಷಿಣ ಭಾರತದವರಿಗೆ ಪ್ರಾತಿನಿಧ್ಯ ಸಿಗುವಂತೆ ಮಾಡಲು ಮತ ಯಾಚಿಸಿದ್ದೇನೆ’ ಎಂದು ಯು.ಪಿ.ಎ. ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವಹೇಳಿದರು.

ಇಲ್ಲಿನ ಪತ್ರಕರ್ತರೊಂದಿಗೆ ಮಂಗಳವಾರ ಆನ್ ಲೈನ್ ಮೂಲಕ ಸುದ್ದಿಗೋಷ್ಠಿ ನಡೆಸಿದ ಅವರು, ‘ಸುಮಾರು 20 ಪಕ್ಷಗಳು ಈಗಾಗಲೆ ಬೆಂಬಲಸಲು ನಿರ್ಧರಿಸಿವೆ. ಮಮತಾ ಬ್ಯಾನರ್ಜಿ ಬುಧವಾರ ದೆಹಲಿಗೆ ಭೇಟಿ ನೀಡಲಿದ್ದು ಈ ವೇಳೆ ಅವರ ಜತೆ ಚರ್ಚಿಸಲಿದ್ದೇನೆ. ಇನ್ನೂ ನಾಲ್ಕೈದು ಪಕ್ಷಗಳು ಬೆಂಬಲಿಸಲು ನಿರ್ಣಯ ಕೈಗೊಳ್ಳಲಿವೆ’ ಎಂದರು.

‘ಬಿಜೆಪಿ ಅಧಿಕಾರಾವಧಿಯಲ್ಲಿ ಸಂಸತ್ನಲ್ಲಿ ಚರ್ಚೆಗೆ ಅವಕಾಶ ಸಿಗುತ್ತಿಲ್ಲ. ನೂರಕ್ಕೂ ಹೆಚ್ಚು ಬಿಜೆಪಿ ಸಂಸದರು ಅಸಮಾಧಾನಗೊಂಡಿದ್ದಾರೆ. ಅವರೆಲ್ಲರೂ ಬೆಂಬಲಿಸುವ ವಿಶ್ವಾಸವಿದೆ’ ಎಂದರು.

‘ಮೂರು ವಾರದಿಂದ ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಬೆಲೆ ಏರಿಕೆ, ಧರ್ಮ ಜಗಳದ ಕುರಿತು ಚರ್ಚೆಗೆ ಅವಕಾಶ ಕೋರಿದ್ದರೂ ಅವಕಾಶ ನೀಡಲಾಗುತ್ತಿಲ್ಲ. ಜನ ಸಂಕಷ್ಟದಲ್ಲಿರುವ ಹೊತ್ತಲ್ಲಿ ಸರ್ಕಾರ ಕ್ರೀಡೆಗೆ ಪ್ರಾತಿನಿಧ್ಯ ನೀಡಲು ಮುಂದಾಗಿದೆ’ ಎಂದು ಆರೋಪಿಸಿದರು.

ಪಿಎಫ್ಐ, ಎಸ್ಡಿಪಿಐ ಬಿಜೆಪಿ ಸಾಕಿರುವ ಸಂಘಟನೆಗಳು:ಸಿದ್ದರಾಮಯ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.