ಬೆಂಗಳೂರು: ಖಾಸಗಿ ಕೆಲಸದ ನಿಮಿತ್ತ ಶುಕ್ರವಾರ ದೆಹಲಿಗೆ ತೆರಳಲಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವರಿಷ್ಠರ ಭೇಟಿಗಾಗಿ ಸಮಯ ಕೇಳಿದ್ದಾರೆ.

ಒಂದು ವೇಳೆ ವರಿಷ್ಠರು ಭೇಟಿಗೆ ಅವಕಾಶ ನೀಡಿದರೆ, ಪಕ್ಷದ ಮತ್ತು ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚಿಸಲಿದ್ದಾರೆ. ವಿಶೇಷವಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ತಂಡ ವಕ್ಫ್ ಹೋರಾಟದ ವಿಚಾರದಲ್ಲಿ ಪಕ್ಷಕ್ಕೆ ಸಹಕಾರ ನೀಡದೇ ಪ್ರತ್ಯೇಕ ಹೋರಾಟ ನಡೆಸಲು ಮುಂದಾಗಿರುವ ವಿಚಾರವನ್ನು ಪ್ರಸ್ತಾಪಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ವತಿಯಿಂದ ಎರಡು ದಿನಗಳ ನಮ್ಮ ಭೂಮಿ ನಮ್ಮ ಹಕ್ಕು ಹೋರಾಟ ಗುರುವಾರ ಆರಂಭವಾಗಿದ್ದು, ಮೊದಲ ದಿನ 9 ಜಿಲ್ಲೆಗಳಲ್ಲಿ ನಡೆದಿದೆ. ಉಳಿದ ಜಿಲ್ಲೆಗಳಲ್ಲಿ ಶುಕ್ರವಾರ ನಡೆಯಲಿದೆ. ಇದಕ್ಕೆ ಪರ್ಯಾಯವಾಗಿ ಯತ್ನಾಳ ನೇತೃತ್ವದ ತಂಡ ಇದೇ 25ರಿಂದ ಜನ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.