ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಮುಹೂರ್ತ ನಿಗದಿಯಾಗಿದೆ. ಅದು ಯಾವಾಗ ಎಂದು ಅವರೇ ಹೇಳಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸೇರಿಯೇ ರಾಜೀನಾಮೆಗೆ ಮುಹೂರ್ತ ಸಿದ್ಧ ಮಾಡಿದ್ದಾರೆ ಎಂದರು.

ಸಿದ್ದರಾಮಯ್ಯ ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ. ಅತಿ ಶೀಘ್ರವೇ ರಾಜೀನಾಮೆ ಕೊಡುತ್ತಾರೆ. ಮುಖ್ಯಮಂತ್ರಿ ಮತ್ತು ಅವರ ಕುಟುಂಬ ಹಲವು ಪ್ರಕರಣಗಳಲ್ಲಿ ಆರೋಪಿ ಸ್ಥಾನದಲ್ಲಿ ನಿಂತಿದೆ. ಭ್ರಷ್ಟಾಚಾರದ ಸಂಬಂಧ ರಾಜ್ಯದ ಜನರ ಬಹಳಷ್ಟು ಪ್ರಶ್ನೆಗಳಿಗೆ ಅವರು ಉತ್ತರ ಕೊಡಬೇಕಿದೆ. ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ಕೊಟ್ಟು ತನಿಖೆಗೆ ಹಾಜರಾಗುವಂತೆ ತಿಳಿಸಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ತನಿಖೆ ಎದುರಿಸುತ್ತೀರಾ? ಆರೋಪಿಯಾಗಿ ಹೋಗುತ್ತೀರಾ ಎಂಬುದನ್ನು ಜನರಿಗೆ ತಿಳಿಸಿ ಎಂದು ಹೇಳಿದರು.

ಮುಖ್ಯಮಂತ್ರಿಯೂ ಸೇರಿ ಕಾಂಗ್ರೆಸ್ನ ಎಲ್ಲರೂ ಭ್ರಷ್ಟಾಚಾರದ ಬಗ್ಗೆ ಉದ್ದುದ್ದ ಭಾಷಣ ಬಿಗಿಯುತ್ತಾರೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಸರಿಯಿಲ್ಲ, ಸರ್ಕಾರ ಕಾಮಗಾರಿಗಳ ಬಿಲ್ ಪಾವತಿಸದ ಕಾರಣ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದರು.

ರೈತರ ಜಮೀನು, ಮಠ– ಮಾನ್ಯಗಳ ಜಮೀನು ವಕ್ಫ್ ಮಂಡಳಿಗಾಗಿ ಕಸಿದುಕೊಳ್ಳುವಲ್ಲಿ ಸಚಿವ ಜಮೀರ್ ಅಹ್ಮದ್ ಷಡ್ಯಂತ್ರದ ಹಿಂದೆ ಮುಖ್ಯಮಂತ್ರಿಯವರ ಕುಮ್ಮಕ್ಕು ಇದೆ ಎಂದೂ ವಿಜಯೇಂದ್ರ ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.