ಬೆಂಗಳೂರು: ‘ನಕ್ಸಲ್ ವಿಕ್ರಂ ಗೌಡನ ಚಟುವಟಿಕೆ ಮೇಲೆ 20 ವರ್ಷಗಳಿಂದ ನಿಗಾ ಇಡಲಾಗಿತ್ತು. ಆತ ಜನ ವಿರೋಧಿ ಕೆಲಸಗಳಲ್ಲಿ ತೊಡಗಿದ್ದ ಎಂಬ ಮಾಹಿತಿಯಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ವಿಕ್ರಂ ಗೌಡ ಕಾನೂನುಬಾಹಿರವಾಗಿ, ಅನುಮತಿ ಇಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ. ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಕಾರಣಕ್ಕೆ ಈ ಘಟನೆ ನಡೆದಿದೆ. ವಿಕ್ರಂ ಗೌಡ ಹತ್ಯೆ ನಕಲಿ ಎನ್ಕೌಂಟರ್ ಅಲ್ಲ’ ಎಂದರು.

‘ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಶರಣಾಗುವಂತೆ ವಿಚಾರವಾದಿಗಳು ಮನವಿ ಮಾಡಿದ್ದಾರೆ. ನ್ಯಾಯಯುತವಾಗಿ ಪ್ರತಿಭಟನೆ ಮಾಡಿ, ನಕ್ಸಲ್ ಚಟುವಟಿಕೆಗೆ ಸೇರಬೇಡಿ ಎಂದಿದ್ದಾರೆ. ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಗತಿಪರ ಚಿಂತಕರು ಪ್ರಯತ್ನಿಸಬೇಕು’ ಎಂದು ಅವರು ಹೇಳಿದರು.

‘ಆಂಧ್ರಪ್ರದೇಶ ಗಡಿ, ತುಮಕೂರಿನ ಪಾವಗಡ ಭಾಗದಲ್ಲಿ ಈ ಹಿಂದೆ ಪೀಪಲ್ಸ್ ವಾರ್ ಗ್ರೂಪ್ ಇತ್ತು. ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಆ ಗುಂಪಿನ ಸದಸ್ಯರು ಅನುಕೂಲಸ್ಥರಿಂದ ಹಣ ಕೇಳುವುದು, ಜಮೀನುಗಳಿಗೆ ಬೇಲಿ ಹಾಕುವುದು, ಪೊಲೀಸರ ಹತ್ಯೆ ಮಾಡಿದ್ದರು. ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಹಲವು ನಕ್ಸಲರು ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಶರಣಾಗಿದ್ದರು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.