ಹೊಸಪೇಟೆ: ವಿಜಯನಗರ ಕ್ಷೇತ್ರದ ಉಪಚುನಾವಣೆ ನಿಮಿತ್ತ ತಾಲ್ಲೂಕಿನ ಮಲಪನಗುಡಿಯಲ್ಲಿ ಬುಧವಾರ ರಾತ್ರಿ ಪ್ರಚಾರ ಕೈಗೊಂಡಿದ್ದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.

’ಮೂರು ಸಲ ಗೆದ್ದರೂ ಗ್ರಾಮದಲ್ಲಿ ಮೂಲಸೌಕರ್ಯ ಕಲ್ಪಿಸಿಲ್ಲ. ಮತ್ತೆ ಮತ ಕೇಳಲು ಬಂದಿದ್ದೀರಿ. ನಿಮಗೇಕೇ ಮತ ಹಾಕಬೇಕು’ ಎಂದು ಪ್ರಶ್ನಿಸಿದರು. ಅದಕ್ಕೆ ಏನೂ ಪ್ರತಿಕ್ರಿಯಿಸದೇ ಕೈಮುಗಿದು ಆನಂದ್ ಸಿಂಗ್ ನಿರ್ಗಮಿಸಿದರು.

ಇತ್ತೀಚೆಗೆ ತಾಲ್ಲೂಕಿನ ಗಾದಿಗನೂರಿಗೆ ಪ್ರಚಾರಕ್ಕೆ ಹೋಗಿದ್ದ ಸಂದರ್ಭದಲ್ಲೂ ಗ್ರಾಮಸ್ಥರು ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಅದರಿಂದ ಸಿಟ್ಟಾಗಿ ಆನಂದ್ ಸಿಂಗ್, ‘ನಿಮ್ಮೂರಿನ ಜನರ ಮತವೇ ನನಗೆ ಬೇಡ’ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.