ಮೈಸೂರು: ‘ರಾಜ್ಯ ರಾಜಕಾರಣದ ಇಂದಿನ ಪರಿಸ್ಥಿತಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ನಿಲುವು ಸರಿಯಿದೆ. ನಾನು ಅಧ್ಯಕ್ಷನಾಗಿದ್ದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಪಕ್ಷದಿಂದ 6 ವರ್ಷಕ್ಕೆ ಉಚ್ಚಾಟಿಸುತ್ತಿದ್ದೆ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜೆಡಿಎಸ್ ರಾಷ್ಟ್ರಾಧ್ಯಕ್ಷರಿಗೆ ವಿಧೇಯನಾಗಿರುತ್ತೇನೆ ಎಂದು ಇಬ್ರಾಹಿಂ ಹೇಳಿದ್ದಾರೆ. ಜಾತ್ಯತೀತವಾದವನ್ನು ಕೊಲೆ ಮಾಡಿ ಜಾತಿವಾದಿ, ಕೋಮುವಾದಿಗಳ ಜೊತೆ ಕುಮಾರಸ್ವಾಮಿ ಮದುವೆಯಾದರೆ ಒಪ್ಪಲು ಸಾಧ್ಯವೇ’ ಎಂದು ಪ್ರಶ್ನಿಸಿದರು.

‘ರಾಜ್ಯಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಅವರಿಗೆ ಸಂಪೂರ್ಣ ಅಧಿಕಾರವಿದೆ. ಮತೀಯವಾದಿಗಳ ಜೊತೆ ಕೈ ಜೋಡಿಸಿರುವ ಕುಮಾರಸ್ವಾಮಿ ಅವರ ವಿರುದ್ಧ ಕ್ರಮ ಜರುಗಿಸಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.