ಮಂಗಳೂರು: ರಾಜ್ಯದ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಹಗಲಿನಲ್ಲಿ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲ ಇರುವ ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಜುಲೈ 11ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗುತ್ತಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ರೈಲ್ವೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ವಿಸ್ಟಾಡೋಮ್ ಬೋಗಿಗಳನ್ನು ಪರಿಚಯಿಸಲಾಗುತ್ತಿದೆ. ಗಣ್ಯರು ಮಂಗಳೂರು ಜಂಕ್ಷನ್- ಯಶವಂತಪುರ (ರೈ.ಸಂ.06540/06539) ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ವಿಸ್ಟಾಡೋಮ್ ಬೋಗಿಗಳಲ್ಲಿ ಕುಳಿತು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ನೋಡಬಹುದಾಗಿದೆ. ಎತ್ತರದ ಪರ್ವತಗಳ ಅದ್ಭುತ ನೋಟ, ಕಣಿವೆಗಳು, ಆಳವಾದ ಕಮರಿಗಳು ಮತ್ತು ಹಚ್ಚ ಹಸಿರಿನ ಈ ಪ್ರದೇಶವು ಮಳೆಗಾಲದ ಸಂದರ್ಭದಲ್ಲಿ ಇನ್ನಷ್ಟು ಸುಂದರ ದೃಶ್ಯಾವಳಿಗಳು ನೋಡುಗರನ್ನು ಬೆರಗುಗೊಳಿಸುತ್ತದೆ.

ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯ ಇದೆ. ಅಗಲವಾದ, ದೊಡ್ಡ ಕಿಟಕಿಗಳು ಪ್ರಯಾಣಿಕರಿಗೆ ಸ್ಪಷ್ಟವಾದ ನೋಟವನ್ನು ನೀಡುತ್ತದೆ. ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್ಎಚ್ಪಿನಲ್ಲಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್ಫಾರ್ಮ್ / ತಂತ್ರಜ್ಞಾನ) ತಯಾರಿಸಲಾಗಿದೆ. ಈ ಬೋಗಿಗಳು ಗಾಜಿನ ಮೇಲ್ಚಾವಣಿ ಹೊಂದಿದೆ.

ಉಡುಪಿಯ ಕೃಷ್ಣಮಠದಲ್ಲಿ ದೇವರ ದರ್ಶನಕ್ಕೆ ಜು.11ರಿಂದಅವಕಾಶ

ಬೋಗಿಯಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು, ಎಲ್ಇಡಿ, ಓವನ್ ಮತ್ತು ರೆಫ್ರಿಜರೇಟರ್, ಮಿನಿ ಪ್ಯಾಂಟ್ರಿ, ಸ್ಟೀಲ್ ಲಗೇಜ್ ಕಪಾಟುಗಳು, ಪ್ರತಿ ಸೀಟಿನಲ್ಲಿ ಮೊಬೈಲ್ ಚಾರ್ಜಿಂಗ್ ಸಾಕೆಟ್ಗಳಿವೆ. ಕೋಚ್ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಜೈವಿಕ ಶೌಚಾಲಯಗಳನ್ನು ಹೊಂದಿದೆ.

ರೈತ ಹುತಾತ್ಮ ದಿನ: ನರಗುಂದದಲ್ಲಿ ಭಾರಿ ಸಮಾವೇಶಕ್ಕೆ ಸಜ್ಜು, ಟಿಕಾಯತ್ಗೆ ಆಹ್ವಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.