ಬೆಂಗಳೂರು: ‘ವಕ್ಫ್ ಮಂಡಳಿ ಆಸ್ತಿ ವಿಚಾರವಾಗಿ ರೈತರಿಗೆ ಯಾವುದೇ ನೋಟಿಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊಟ್ಟಿರುವ ನೋಟಿಸ್ ವಾಪಸ್ ಪಡೆಯಿರಿ ಎಂದಿದ್ದಾರೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
.ವಾಚಕರ ವಾಣಿ | ವಕ್ಫ್ ವಿವಾದ: ರಾಜಕೀಯ ಸಲ್ಲದು.
ಸದಾಶಿವ ನಗರದಲ್ಲಿ ತಮ್ಮ ಮನೆಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವಕ್ಫ್ ಮಂಡಳಿ ಆಸ್ತಿ ವಿಚಾರ ಸದ್ಯ ಮುಗಿದು ಹೋದ ಅಧ್ಯಾಯ. ಮುಂದೆ ಯಾವ ರೀತಿ ಬೆಳವಣಿಗೆ ಆಗುತ್ತದೆಯೊ ಗೊತ್ತಿಲ್ಲ. ಕಂದಾಯ ಇಲಾಖೆಯಲ್ಲಿನ ದಾಖಲಾತಿ ಹಾಗೂ ವಕ್ಫ್ ದಾಖಲಾತಿಯಲ್ಲಿ ಒಂದೇ ಇದ್ದರೆ ಮಾತ್ರ ಯಾವುದೇ ಗೊಂದಲ ಆಗುವುದಿಲ್ಲ. ಅಂತಿಮವಾಗಿ ಕಂದಾಯ ದಾಖಲಾತಿ ಮುಖ್ಯ. ಅದರಲ್ಲಿ ಏನಿದೆಯೋ ಅದರಂತೆ ದಾಖಲಾಗಲಿದೆ. ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವ ಕೆಲಸ ಮಾಡುವುದಿಲ್ಲ’ ಎಂದರು.

ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಪುಡಾರಿ ಎಂದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ರಾಜಕೀಯ ಪುಡಾರಿ ಅಂದಿದ್ದು ಗೊತ್ತಿಲ್ಲ. ಪುಡಾರಿ ಅನ್ನೋದು ಸರಿನಾ? ತಪ್ಪಾ ಎಂದೂ ನನಗೆ ಗೊತ್ತಿಲ್ಲ. ನಮ್ಮನ್ನೂ ಪುಡಾರಿ ಅನ್ನುತ್ತಾರೆ. ಪುಡಾರಿ ಶಬ್ದ ಬಳಸುವುದು ಸರಿನಾ?’ ಎಂದು ಮರು ಪ್ರಶ್ನೆ ಕೇಳಿದರು.
.ವಕ್ಫ್ ಹೆಸರಲ್ಲಿ ಜಮೀನು ಲೂಟಿಗೆ ಯತ್ನ: ರೂಪಾಲಿ ನಾಯ್ಕ .
‘ಶಕ್ತಿ’ ಯೋಜನೆ ಪರಿಷ್ಕರಣೆ ಮಾಡುತ್ತೇವೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪರಮೇಶ್ವರ, ‘ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲ ಇಲ್ಲ, ಅನುಷ್ಠಾನ ಆಗುತ್ತಿದೆ. ಆ ಕುರಿತು ಏನೇ ಚರ್ಚೆ ಆದರೂ ಸಚಿವ ಸಂಪುಟಕ್ಕೆ ಬರಬೇಕು’ ಎಂದರು.

‘ ಶಕ್ತಿ ಯೋಜನೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ಮಾಡಿಲ್ಲ. ಗ್ಯಾರಂಟಿ ಮುಂದುವರಿಸುತ್ತೇವೆ ಎಂದು ಪದೇ ಪದೇ ಮುಖ್ಯಮಂತ್ರಿ ಹೇಳಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಅವರು ಡಿ.ಕೆ. ಶಿವಕುಮಾರ್ ಅವರ ಮಾತು ಉಲ್ಲೇಖಿಸಿ ಹೇಳಿದ್ದಾರೆ. ಅದಕ್ಕೆ ಪ್ರಧಾನಿ ಮೋದಿ ಅವರು ಪ್ರತಿಕ್ರಿಯಿಸಿದ್ದಾರೆ’ ಎಂದರು.
.ರೈತರಿಗೆ ವಕ್ಫ್ ನೋಟಿಸ್: ಉಗ್ರ ಹೋರಾಟ ನಡೆಸುತ್ತೇವೆ ಎಂದ ಬಿಜೆಪಿ .
‘ಪ್ರಧಾನಿ ಮೋದಿ ಅವರೇ ನೀವು ಕೊಟ್ಟ ಭರವಸೆ ಅನುಷ್ಠಾನ ಮಾಡಿದ್ದೀರಾ? 2 ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಹೇಳಿದ್ದೀರಿ. ಜಾರಿ ಆಗಿದೆಯೇ? ರೈತರ ಆದಾಯ ದ್ವಿಗುಣ ಆಗಿದೆಯೇ? ನೀವು ಕೊಟ್ಟ ಭರವಸೆ ಅನುಷ್ಠಾನ ಮಾಡಿಲ್ಲ. ನಾವು ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಡಿ.ಕೆ. ಶಿವಕುಮಾರ್ ಅವರು ಕೂಡಾ ಗ್ಯಾರಂಟಿಗಳನ್ನು ನಿಲ್ಲಿಸ್ತೇವೆ ಎಂದಿಲ್ಲ’ ಎಂದರು.

‘ಒಂದು ವೇಳೆ ಗ್ಯಾರಂಟಿ ಯೋಜನೆಗಳ ಬಗ್ಗೆ ಏನಾದರು ತೀರ್ಮಾನಗಳನ್ನು ತೆಗೆದುಕೊಳ್ಳುವುದಾದರೆ ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಒಬ್ಬೊಬ್ಬರೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಅದನ್ನು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ, ಸಾಧಕ-ಬಾಧಕ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಆದರೆ, ಗ್ಯಾರಂಟಿಗಳನ್ನು ನಿಲ್ಲಿಸುವ ಸ್ಥಿತಿಗೆ ನಾವು ಬಂದಿಲ್ಲ. ಗ್ಯಾರಂಟಿಗಳನ್ನು ನಿಲ್ಲಿಸುವ ಬಗ್ಗೆ ಪಕ್ಷದ ವೇದಿಕೆ, ಸಂಪುಟ ಸಭೆ, ಹೊರಗಡೆ ಎಲ್ಲೂ ಈ ಚರ್ಚೆ ಮಾಡಿಲ್ಲ’ ಎಂದು ಹೇಳಿದರು.
.ವಕ್ಫ್ ಆಸ್ತಿ ವಿಷಯಕ್ಕೆ ಗಲಾಟೆ: ಕಲ್ಲು ತೂರಾಟ .
‘ಗ್ಯಾರಂಟಿಗಳ ಬಗ್ಗೆ ಸಚಿವರು, ಶಾಸಕರು ಸಲಹೆ ಕೊಡುತ್ತಾರೆ. ಆರ್ಥಿಕ ಹೊರೆ ಹೆಚ್ಚಾಗಿದೆ, ಕಡಿಮೆ ಮಾಡಿ ಎನ್ನುತ್ತಿದ್ದಾರೆ. ₹ 2 ಸಾವಿರ ಎಲ್ಲರಿಗೂ ಕೊಟ್ಟಿರುವ ಬಗ್ಗೆಯೂ ಶಾಸಕರು ಮಾತಾಡುತ್ತಾರೆ. ಗ್ಯಾರಂಟಿಗಳ ಪರಿಣಾಮ, ಆರ್ಥಿಕ ಹೊರೆ ಬಗ್ಗೆ ನಮಗೂ ಅರಿವಿದೆ. ಸಚಿವರು, ಶಾಸಕರ ಸಲಹೆಗಳು ಗಮನದಲ್ಲಿದೆ. ಆದರೆ, ಬಿಜೆಪಿಯವರು ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆಗೆ ಗ್ಯಾರಂಟಿ ಯೋಜನೆಗಳ ಕುರಿತ ಹೇಳಿಕೆಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಎಲ್ಲ ವಿಚಾರಗಳಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ’ ಎಂದು ವಾಗ್ದಾಳಿ ಮಾಡಿದರು.
.ಕೋಲಾರದ ದೇವಸ್ಥಾನದ ಆಸ್ತಿಯೂ ವಕ್ಫ್ ಆಸ್ತಿಯಾಗಿ ನಮೂದು: ಅಶೋಕ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.