ದಾವಣಗೆರೆ: ಎರಡನೇ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಇಲ್ಲಿನ ವಿರಕ್ತ ಮಠಕ್ಕೆ ಪೊಲೀಸರು ಕಣ್ಗಾವಲು ಇರಿಸಿದ್ದಾರೆ.

ಶರಣರು ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದು, ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಆಗಮಿಸಿದ್ದಾರೆ.

ಶಿವಮೂರ್ತಿ ಶರಣರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರಿಗೆ ಮಂಗಳವಾರದವರೆಗೆ ಕಾಲಾವಕಾಶ ನೀಡಿ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಸೋಮವಾರ ಆದೇಶ ಪ್ರಕ್ರಟಿಸಿದ್ದು, ಪೊಲೀಸರು ಯಾವುದೇ ಕ್ಷಣದಲ್ಲಾದರೂ ಬಂಧಿಸುವ ಸಾಧ್ಯತೆ ಇದೆ.
.ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಆದೇಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.