ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ. ಬಹುತೇಕ ಎಲ್ಲಾ ನದಿಗಳು ಮೈದುಂಬಿ ಹರಿಯುತ್ತಿವೆ. ಅಂತೆಯೇ ಜಲಪಾತಗಳೂ ವೈಯ್ಯಾರ ತೋರತೊಡಗಿವೆ. ಈ ಜಲಪಾತಗಳು ಮಳೆಗಾಲ ಮತ್ತು ಮಳೆಗಾಲ ಮುಗಿದ ಒಂದೆರಡು ತಿಂಗಳಲ್ಲಷ್ಟೇ ಮೈದುಂಬಿ ಧುಮ್ಮಿಕ್ಕುತ್ತವೆ. ಇವುಗಳ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಇದು ಸರಿಯಾದ ಸಮಯ. ಪಶ್ಚಿಮ ಘಟ್ಟ, ಮಲೆನಾಡು, ಅರೆಮಲೆನಾಡು ಮಾತ್ರವಲ್ಲದೆ ಬಯಲುಸೀಮೆಯಲ್ಲೂ ಹಲವು ಜಲಪಾತಗಳಲ್ಲೀಗ ಜೀವಕಳೆ. ಪ್ರಖ್ಯಾತ ಜಲಪಾತಗಳ ಬಳಿ ಈಗಾಗಲೇ ಪ್ರವಾಸಿಗರ ದಂಡು ಹೆಚ್ಚಾಗಿದೆ. ಹೆಚ್ಚು ಜನಪ್ರಿಯವಲ್ಲದ, ಅದರೆ ಸೌಂದರ್ಯದಲ್ಲಿ ಕಡಿಮೆ ಇಲ್ಲದ ಜಲಪಾತಗಳು ಹಲವು...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.