ಅಥಣಿ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಎಂದಿಗೂ ಒಪ್ಪುವುದಿಲ್ಲ. ಪಕ್ಷದಲ್ಲಿ ಜ್ಯೂನಿಯರ್ ಆಗಿರುವ ಅವರಿಗೆ ಯಾವ ಸಿದ್ಧಾಂತ ಗೊತ್ತಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಬೇಕು’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಾರತೀಯ ಜನತಾ ಪಕ್ಷಕ್ಕೆ ‘ಭ್ರಷ್ಟ’ ಎಂಬ ಲೇಬಲ್ ತಂದುಕೊಟ್ಟಿದ್ದೇ ವಿಜಯೇಂದ್ರ. ಅವರು ಅಧ್ಯಕ್ಷರಾಗಿದ್ದಕ್ಕೆ ನನ್ನ ವಿರೋಧವಿದೆ. ನಾನು ಬಿ.ಎಸ್.ಯಡಿಯೂರಪ್ಪ ಅವರನ್ನು ಎಂದಿಗೂ ವಿರೋಧಿಸುವುದಿಲ್ಲ. ಅವರು ಪಕ್ಷದ ಪ್ರಶ್ನಾತೀತ ನಾಯಕ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ. ಅನಂತಕುಮಾರ ನಿಧನರಾದ ನಂತರ ನಮ್ಮ ಪಕ್ಷದಲ್ಲಿ ಯಾರೂ ಪ್ರಬಲ ನಾಯಕರಾಗಿಲ್ಲ’ ಎಂದು ಹೇಳಿದರು.

ಬಿಜೆಪಿ ನಾಯಕರೊಂದಿಗೆ ಆರ್‌ಎಸ್‌ಎಸ್‌ನವರು ಸಭೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಸಭೆಯಲ್ಲಿ ಏನು ಚರ್ಚಿಸಲಾಯಿತು. ಮುಖಂಡರು ಯಾರನ್ನು ಬೈದರು ಎಂದು ಹೇಳಲು ಬರುವುದಿಲ್ಲ. ಆದರೆ, ಬಿಜೆಪಿ ಆಡಳಿತವನ್ನು ಒಬ್ಬರ ಕೈಯಲ್ಲಿ ಕೊಡುವುದು ಬೇಡ ಎಂದಿದ್ದೇವೆ’ ಎಂದರು.

‘ರಾಜ್ಯದಲ್ಲಿ 120ರಿಂದ 130 ಸ್ಥಾನ ಗೆಲ್ಲಿಸಿಕೊಂಡು ಬರುವ ಶಕ್ತಿ ನಮ್ಮಲ್ಲಿದೆ. 15ರಿಂದ 20 ಜನರಿಗೆ ಸಾಮೂಹಿಕವಾಗಿ ನಾಯಕತ್ವ ಕೊಡಿ. ಇಂಥ ಕೆಲಸ ಮಾಡುವಂತೆ ಟಾಸ್ಕ್ ಕೊಡಿ. ಅದರಲ್ಲಿ ವಿಫಲವಾದರೆ, ಪಕ್ಷದ ಹೊರಹಾಕಿ ಎಂದಿದ್ದೇವೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ವಿಶ್ರಾಂತಿ ಅಗತ್ಯವಿದೆ. ಸಲಹೆ ಬೇಕಾದರೆ ಅವರ ಮನೆಗೆ ಹೋಗುತ್ತೇವೆ’ ಎಂದು ಹೇಳಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.