ಬೆಳಗಾವಿ: ‘ಬಿಲ್ಲವ, ಈಡಿಗ ಸಮುದಾಯದ ಮತ್ತೊಂದು ಸಮಾವೇಶವನ್ನು ಜನವರಿಯಲ್ಲಿ ಮಾಡಬೇಕು ಎಂದು ಸಮಾಜದವರು ಹೇಳುತ್ತಿದ್ದಾರೆ. ಆ ಬಗ್ಗೆ ಬೆಂಗಳೂರಿನಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾನು ಸಮಾವೇಶ ಮಾಡಿದ ನಂತರ ಬೆಂಗಳೂರಿನಲ್ಲಿ ಮತ್ತೊಂದು ಸಮಾವೇಶ ಆಗಿದೆ. ಸರದಿ ಲೆಕ್ಕದಲ್ಲಿ ಸಮಾವೇಶ ನಡೆಯುತ್ತಿದೆ. ಅದು ಒಳ್ಳೆಯದು. ನನ್ನ ಸಮಾವೇಶಕ್ಕೆ ಪರ್ಯಾಯ ಎಂದು ಹೇಳಲ್ಲ’ ಎಂದರು.

ಬೆಂಗಳೂರಿನಲ್ಲಿ ನಡೆದ ಬಿಲ್ಲವ, ಈಡಿಗರ ಸಮಾವೇಶ ಕುರಿತು ಪ್ರತಿಕ್ರಿಯಿಸಿದ ಅವರು, ‘ತುಳಿತಕ್ಕೆ ಒಳಗಾದವರನ್ನು ಒಡೆಯುವ ಕೆಲಸ ಆಗಬಾರದು. ಸಮುದಾಯ ಒಡೆಯಲು ಈ ಸಮಾವೇಶ ನಡೆದಿದೆ ಎಂಬ ಧಾಟಿಯಲ್ಲಿ ನಾನು ಹೇಳುತ್ತಿಲ್ಲ’ ಎಂದರು.

‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದುಳಿದ ವರ್ಗಗಳ ಜಾತಿ ಗಣತಿ ಆಗಬೇಕು ಎಂದಿದ್ದಾರೆ. ಯಾವುದೇ ಸಮುದಾಯ ಒಡೆಯುವ ಕೆಲಸ ಆಗಬಾರದು. ಸಮಾವೇಶದಲ್ಲಿ ಸಮಾಜದ ಎಲ್ಲ ಸ್ವಾಮೀಜಿಗಳು ಬಂದರೆ ಒಗ್ಗಟ್ಟು ಸಾಧ್ಯ. ಆದರೆ, ಎಲ್ಲ ಸ್ವಾಮೀಜಿಗಳು ಇರಲಿಲ್ಲ. ಇದು ತಪ್ಪು ಎಂಬ ಅಭಿಪ್ರಾಯವನ್ನು ಸ್ವಾಮೀಜಿಗಳು ವ್ಯಕ್ತಪಡಿಸಿದ್ದರು. ಅವರ ಕೋರಿಕೆಯ ಮೇರೆಗೆ ನಾನು ಸಮಾವೇಶಕ್ಕೆ ಹೋಗಿಲ್ಲ’ ಎಂದರು.

‘ಸಮಾವೇಶದ ಹಿಂದೆ ನಿಮ್ಮನ್ನು ಗುರಿ ಮಾಡುವ ಉದ್ದೇಶವಿದೆ’ ಎಂದು ಚರ್ಚೆ ಆಗುತ್ತಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಹರಿಪ್ರಸಾದ್, ‘ನಮ್ಮ ಸಮುದಾಯದಲ್ಲಿ ಇನ್ನೊಬ್ಬ ನಾಯಕನಾಗುತ್ತಾನೆ ಎಂದರೆ ಬಹಳ ಸಂತೋಷ. ಸೈಡ್ ಲೈನ್ ಮಾಡುವುದು, ಟಾರ್ಗೆಟ್ ಮಾಡುವುದನ್ನು ಬಹಳ ವರ್ಷದಿಂದ ನೋಡಿದ್ದೇನೆ’ ಎಂದರು.

‘ಸಮಾವೇಶದಲ್ಲಿ ಏನು ಬೇಡಿಕೆ ಇಟ್ಟಿದ್ದಾರೆ ಎಂದು ಗೊತ್ತಿಲ್ಲ. ನಾರಾಯಣ ಗುರು ಅಧ್ಯಯನ ಪೀಠ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಯಾರೋ ತಪ್ಪುದಾರಿಗೆ ಎಳೆದಿದ್ದಾರೆ. ನನ್ನ ಅನುದಾನದಲ್ಲಿ ₹ 50 ಲಕ್ಷ ಕೊಟ್ಟು ಪೀಠ ಆರಂಭವಾಗಿದೆ. ಅದೀಗ ಅರ್ಧದಲ್ಲಿದ್ದು ಪೂರ್ಣಗೊಳಿಸಲು ₹ 2 ಕೋಟಿ ಅನುದಾನಕ್ಕೆ ಎರಡು ವರ್ಷದಿಂದ ಓಡಾಡುತ್ತಿದ್ದೇನೆ. ಕೋಟಿ ಚನ್ನಯ್ಯ ಥೀಂ ಪಾರ್ಕ್‌ಗೆ ₹ 5 ಕೋಟಿ ಕೊಟ್ಟಿದ್ದೇವೆ ಎಂದಿದ್ದಾರೆ. ಅದು ಎಲ್ಲಿ ಇದೆ ಎಂದು ನನಗೆ ಗೊತ್ತಿಲ್ಲ’ ಎಂದರು.
.ಮುಖ್ಯಮಂತ್ರಿಯಿಂದ ಈಡಿಗ ಸಮುದಾಯ ಒಡೆಯುವ ಹುನ್ನಾರ: ಪ್ರಣವಾನಂದ ಸ್ವಾಮೀಜಿ.ಈಡಿಗ ಸಮುದಾಯ ಇನ್ನಷ್ಟು ಸಂಘಟಿತವಾಗಲಿ: ಬಿ.ಕೆ. ಹರಿಪ್ರಸಾದ್.ಬೆಂಗಳೂರು: ಬೇಡಿಕೆ ಈಡೇರಿಕೆಗಾಗಿ ಈಡಿಗರ ಶಕ್ತಿ ಪ್ರದರ್ಶನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.