ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನ.7ರಿಂದ 9ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನ.7ರಂದು ಹೆಚ್ಚು ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಇದೇ 9ರಿಂದ ರಾಜ್ಯದಾದ್ಯಂತ ಮಳೆ ತಗ್ಗುವ ನಿರೀಕ್ಷೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮಳೆ–ಎಲ್ಲಿ, ಎಷ್ಟು?: ಉಡುಪಿಯಲ್ಲಿ ಶನಿವಾರ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಚನ್ನಪಟ್ಟಣ 7, ಮಧುಗಿರಿ 6, ಮಂಗಳೂರು, ಕಾರ್ಕಳ, ಅಜ್ಜಂಪುರ, ಮದ್ದೂರು 5, ಕುಂದಾಪುರ, ಬಂಟ್ವಾಳ, ಪುತ್ತೂರು, ಕೋಲಾರ, ಶ್ರೀನಿವಾಸಪುರ 4, ಧಾರವಾಡ, ಪಾಂಡವಪುರ, ಚಿಂತಾಮಣಿ, ಗೌರಿಬಿದನೂರು 3, ಮೂಡುಬಿದಿರೆ, ಭಟ್ಕಳ, ಹಾಸನ, ಬಂಗಾರಪೇಟೆ, ಶಿಕಾರಿಪುರ, ಚಿಕ್ಕಬಳ್ಳಾಪುರ, ಹಗರಿಬೊಮ್ಮನಹಳ್ಳಿ 2, ಅರಕಲಗೂಡು, ಅರಸೀಕೆರೆ, ಬಾಗೇಪಲ್ಲಿ, ತೊಂಡೆಬಾವಿ, ಭದ್ರಾವತಿ, ಪಾವಗಡ, ಕೊಪ್ಪ, ದೊಡ್ಡಬಳ್ಳಾಪುರ, ಶ್ರೀರಂಗಪಟ್ಟಣದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.