ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದ ಅರ್ಧ ಭಾಗದಲ್ಲಿ 3 ದಿನ ಭಾರಿ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹವಾಮಾನ ಇಲಾಖೆ
Published : 5 ಅಕ್ಟೋಬರ್ 2024, 23:30 IST
Last Updated : 5 ಅಕ್ಟೋಬರ್ 2024, 23:30 IST
ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯದ ಅರ್ಧ ಭಾಗದಷ್ಟು ಜಿಲ್ಲೆಗಳಲ್ಲಿ ಮೂರು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಕರಾವಳಿಯ ಎಲ್ಲ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 6 ರಿಂದ 8ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಇಲಾಖೆ ಮುನ್ಸೂಚನೆ ನೀಡಿದೆ.

ಭಾನುವಾರದಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಗುಡುಗುಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ.

ಸೋಮವಾರ ಮತ್ತು ಮಂಗಳವಾರವೂ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದಾಗಿ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT