ಬೆಂಗಳೂರು: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮಪ್ರದೇಶಕ್ಕೆ ಸಂಬಂಧಿಸಿದಂತೆ ಆ ವ್ಯಾಪ್ತಿಯ 10 ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು, ಮುಖ್ಯಮಂತ್ರಿ ಜೊತೆ ಚರ್ಚಿಸಿದ ಬಳಿಕ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವ ಮಂಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದ ಸಚಿವ ಸಂಪುಟ ಉಪಸಮಿತಿ ನಿರ್ಧರಿಸಿದೆ.

ಸಮಿತಿಯ ಸಭೆ ಬುಧವಾರ ನಡೆಯಿತು. ಸಮಿತಿಯ ಸದಸ್ಯರಾದ ಎಚ್.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಮಧು ಬಂಗಾರಪ್ಪ, ಮಂಕಾಳ ವೈದ್ಯ ಸಭೆಯಲ್ಲಿದ್ದರು.

ಪರಿಸರ ಸೂಕ್ಷ್ಮಪ್ರದೇಶದ ಕುರಿತಂತೆ ಕೇಂದ್ರ ಸರ್ಕಾರ ಆಗಸ್ಟ್ 2ರಂದು ಹೊರಡಿಸಿರುವ ಅಧಿಸೂಚನೆಯನ್ನು (ಕಸ್ತೂರಿ ರಂಗನ್ ಸಮಿತಿ ವರದಿ) ಯಥಾವತ್ ಒಪ್ಪಿಕೊಂಡರೆ ಪಶ್ಚಿಮಘಟ್ಟದಲ್ಲಿ ನೆಲೆ ಕಂಡುಕೊಂಡಿರುವ ಜನರ ಮೇಲೆ ಆಗಬಹುದಾದ ಪರಿಣಾಮ, ಸಾಧಕ –ಬಾಧಕಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.

‘ರಾಜ್ಯದ ಪಶ್ಚಿಮ ಘಟ್ಟದಲ್ಲಿ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವಂತೆ ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿದೆ. ಆದರೆ, ರಾಜ್ಯ ಸರ್ಕಾರ ವನ್ಯಜೀವಿಧಾಮ, ಅಭಯಾರಣ್ಯ, ಹುಲಿ ಸಂರಕ್ಷಿತ ಮೀಸಲು ಸೇರಿದಂತೆ ವಿವಿಧ ಅರಣ್ಯ ಪ್ರದೇಶಗಳಲ್ಲಿ 16,632 ಚದರ ಕಿ.ಮೀ. ಪ್ರದೇಶವು ಘೋಷಿತ ಅರಣ್ಯ, ಸಂರಕ್ಷಿತ ಪ್ರದೇಶ ಮತ್ತು ಸಂರಕ್ಷಿತ ಪ್ರದೇಶಗಳಿಗೆ ಹೊಂದಿಕೊಂಡಿರುವ ಪರಿಸರ ಸೂಕ್ಷ್ಮ ವಲಯ (ಇಎಸ್‌ಝೆಡ್) ಎಂದು ಈಗಾಗಲೇ ಘೋಷಿಸಲಾಗಿದೆ. ಅಲ್ಲದೆ, ಈ ಎಲ್ಲ ಪ್ರದೇಶಗಳು ಸಂರಕ್ಷಿತವಾಗಿವೆ. ಹೀಗಾಗಿ, ಆ ಪ್ರದೇಶಕ್ಕೆ ಸೀಮಿತಗೊಳಿಸಿ ಕಸ್ತೂರಿ ರಂಗನ್ ಸಮಿತಿಯ ಶಿಫಾರಸಿನಂತೆ ಸರ್ಕಾರದ ನಿಲುವು ವ್ಯಕ್ತಪಡಿಸಲು ಸಚಿವ ಸಂಪುಟಕ್ಕೆ ಶಿಫಾರಸು ಮಾಡಬಹುದು’ ಎಂಬ ಈಶ್ವರ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.

‘ಪಶ್ಚಿಮ ಘಟ್ಟ ಪ್ರದೇಶದಲ್ಲಿ 1,533 ವಸತಿ ಪ್ರದೇಶಗಳಿವೆ. ಅಲ್ಲಿರುವ ಜನರ ಬದುಕಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ನಿರ್ದಿಷ್ಟ ಷರತ್ತುಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರಕ್ಕೆ ಸೆಪ್ಟೆಂಬರ್ ಅಂತ್ಯದ ಒಳಗೆ ರಾಜ್ಯದ ನಿಲುವು ತಿಳಿಸಬೇಕಾಗಿದೆ’ ಎಂದೂ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.