ಮೈಸೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಹಣವನ್ನು ಜನರ ಅನುಕೂಲಕ್ಕಾಗಿ ಅಭಿವೃದ್ಧಿಗೆ ಬಳಕೆ ಮಾಡುವುದರಲ್ಲಿ ಯಾವ ತಪ್ಪುಗಳೂ ಆಗಿಲ್ಲ’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ವರುಣ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಮುಡಾದಿಂದ ಕೈಗೆತ್ತಿಕೊಳ್ಳಲಾದ ₹387 ಕೋಟಿ ವೆಚ್ಚದ ಕಾಮಗಾರಿಗಳ ವಿವರ ನೀಡುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಬಗ್ಗೆ ಇಲ್ಲಿ ಶನಿವಾರ ಪ್ರತಿಕ್ರಿಯಿಸಿದ ಯತೀಂದ್ರ, ‘ಮುಡಾ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿಗೆ ಮಾತ್ರ ಹಣ ಬಳಕೆಯಾಗಿದೆ. ಅದರಲ್ಲಿ ತಪ್ಪೇನಿದೆ ಹೇಳಿ?’ ಎಂದು ಕೇಳಿದರು.

‘ಆ ಪ್ರಾಧಿಕಾರದ ಹಣ ಇರುವುದೇ ಜನರ ಒಳತಿಗೆ ಬಳಸುವುದಕ್ಕೆ. ಎಲ್ಲದಕ್ಕೂ ಸುಮ್ಮನೆ ಆರೋಪ ಮಾಡುತ್ತಾ ಹೋದರೆ ಹೇಗೆ ಹೇಳಿ? ನಮ್ಮ ತಂದೆ (ಸಿದ್ದರಾಮಯ್ಯ) ಮೇಲೆ ಮಾಡುತ್ತಿರುವ ಎಲ್ಲಾ ಆರೋಪಗಳೂ ಸುಳ್ಳಿನಿಂದ ಕೂಡಿವೆ. ನಮ್ಮ ಸರ್ಕಾರದ ವಿರುದ್ಧ ಮಾತನಾಡಲು ವಿರೋಧ ಪಕ್ಷಗಳ ಯಾರಿಗೂ ಯಾವ ವಿಚಾರಗಳೂ ಸಿಗುತ್ತಿಲ್ಲ. ಹೀಗಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರಷ್ಟೆ’ ಎಂದು ಹೇಳಿದರು.

‘ಇಡೀ ವಿಶ್ವದಲ್ಲೇ, ಜನರ ಖಾತೆಗಳಿಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು. ಇಂತಹ ಗ್ಯಾರಂಟಿ ಯೋಜನೆಗಳನ್ನು ಸಹಿಸಿಕೊಳ್ಳಲಾಗದೆ ವಿನಾಕಾರಣ ಆರೋಪಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಎಂದು ಕೇಳುತ್ತಲೇ ಇರುತ್ತಾರೆ. ಅವರೇಕೆ ರಾಜೀನಾಮೆ ಕೊಡಬೇಕು? ಆರೋಪಗಳಿಗೆಲ್ಲಾ ರಾಜೀನಾಮೆ ಕೊಡುತ್ತಾ ಹೋದರೆ ಅದರಲ್ಲಿ ಅರ್ಥ ಇದೆಯಾ?’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.