ಮೈಸೂರು: ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ' ಅದಾನಿಯನ್ನು ತಕ್ಷಣ ಬಂಧಿಸಬೇಕು. ತಪ್ಪಿಸಿಕೊಳ್ಳಲು ಬಿಡಬಾರದು' ಎಂದು ಆಗ್ರಹಿಸಿದರು.

'ಅದಾನಿಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಪದೇ ಪದೇ ಹರಾಜಾಗುತ್ತಿದೆಯಲ್ಲವೇ' ಎನ್ನುವ ಮಾಧ್ಯಮದವರ ಪ್ರಶ್ನೆಗೆ, ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ. ನಿಮಗೆ ಗೊತ್ತಿಲ್ವಾ? ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ಏಕೆ ತೋರಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ರೈತರಿಗೆ ರಿಯಾಯಿತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ರಾಜ್ಯಕ್ಕೆ ಶೇ 58ರಷ್ಟು ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ ಎಂದು ದೂರಿದರು.

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದ್ದು ಸರಿ ಎಂದು ಜೋಶಿ ಹೇಳಿದ್ದರೆ ಮಣ್ಣಿನ ಮಗ, ರೈತರ ಮಗ ಅಂದುಕೊಂಡಿರುವ ಎಚ್.ಡಿ.ಕುಮಾರಸ್ವಾಮಿಯವರು ಉಸಿರೇ ಬಿಡುತ್ತಿಲ್ಲವಲ್ಲ ಏಕೆ? ಎಂದು ಕೇಳಿದರು.

ವರ್ಷದಿಂದ ವರ್ಷಕ್ಕೆ ನಬಾರ್ಡ್ನಿಂದ ರಾಜ್ಯದ ರೈತರಿಗೆ ಕೊಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಆದರೆ,ಈ ಬಾರಿ ಕಡಿತಗೊಳಿಸಿದೆ. ರೈತರಿಗೆ ಶೇ 4.5ರಷ್ಟು ಬಡ್ಡಿದರದಲ್ಲಿ ನಬಾರ್ಡ್ ಸಾಲ ಕೊಡುತ್ತದೆ. ಈ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್ಗಳ ಬಳಿ ಸಾಲಕ್ಕೆ ಹೋಗಿ ಶೇ10 ರಷ್ಟು ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ. ಇಷ್ಟು ದೊಡ್ಡ ಪ್ರಮಾಣದ ಅನ್ಯಾಯವನ್ನು ಜೋಶಿ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಿಂದಲೇ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಅನ್ಯಾಯ ಸರಿಪಡಿಸಿ ಎಂದು ಮನವಿ ಕೊಟ್ಟಿದ್ದೇನೆ. ರಾಜ್ಯದ ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅನ್ಯಾಯ ಸರಿಪಡಿಸಲಿ ಎಂದು ಸವಾಲು ಹಾಕಿದರು.

ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿದ್ದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ ಸುಳ್ಳು ಹೇಳಿ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲಿಗೆ ರಾಜ್ಯದ ಜನರಿಗೆ ಏಳು ಕೆಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆಜಿಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು.

ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ: ಸಿಎಂ ಪ್ರಶ್ನೆ

ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಎಂದು ಕೇಳಿದರು.

ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಮಾನದಂಡ ರಚಿಸಿದ್ದೇ ಬಿಜೆಪಿ. ಈಗ ಇವರೇ ಪ್ರತಿಭಟನೆ ಅಂತ ಫೋಟೊ ತೆಗೆಸಿಕೊಳ್ತಾ ಇದಾರೆ ಎಂದು ಲೇವಡಿ ಮಾಡಿದರು.

ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಶಾಸಕ ಡಿ.ರವಿಶಂಕರ್, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯ್ಕುಮಾರ್ ಪಾಲ್ಗೊಂಡಿದ್ದರು.
.ಶಾಸಕರಿಗೆ ವಿಶೇಷ ಅನುದಾನ: ಸಿಎಂ ಸಿದ್ದರಾಮಯ್ಯ ಅಭಯ .ಕೇಂದ್ರದಿಂದ 5.8ಕೋಟಿ ಬಿಪಿಎಲ್ ಕಾರ್ಡ್ ರದ್ದತಿಗೆ ಮೌನವೇಕೆ?: ದಿನೇಶ್ ಗುಂಡೂರಾವ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.