ಸೋಮವಾರ, 1 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಜೆಟ್‌ನಲ್ಲಿ ಹೆಜ್ಜಾಲ-ಚಾಮರಾಜನಗರ ರೈಲು ಯೋಜನೆ ಸೇರ್ಪಡೆ: ಅಶ್ವಿನಿ ವೈಷ್ಣವ್

Published 28 ಜೂನ್ 2024, 15:52 IST
Last Updated 28 ಜೂನ್ 2024, 15:52 IST
ಅಕ್ಷರ ಗಾತ್ರ

ನವದೆಹಲಿ: ಹೆಜ್ಜಾಲ - ಚಾಮರಾಜನಗರ ನಡುವಿನ ರೈಲ್ವೆ ಯೋಜನೆಯನ್ನು ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಸೇರಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಈ ಬಗ್ಗೆ ಮಳವಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ.ಅನ್ನದಾನಿ ಬರೆದಿದ್ದ ಪತ್ರದ ಬಗ್ಗೆ ಸ್ಪಂದಿಸಿರುವ ಸಚಿವರು, ಈ ಬಗ್ಗೆ ಮಂಡ್ಯ ಲೋಕಸಭೆ ಕ್ಷೇತ್ರದ ಸಂಸದರೂ ಆಗಿರುವ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

ಹೆಜ್ಜಾಲ-ಚಾಮರಾಜನಗರ ನಡುವಿನ ಮಾರ್ಗವು ಕನಕಪುರ, ಮಳವಳ್ಳಿ, ಕೊಳ್ಳೇಗಾಲ, ಯಳಂದೂರು ಮಾರ್ಗವಾಗಿ ಹಾದು ಹೋಗಲಿದ್ದು, ಈ ಯೋಜನೆ ಈ ಭಾಗದ ಜನರ ಬಹುದಿನಗಳ ಕನಸಾಗಿದೆ. ಈ ರೈಲ್ವೆ ಮಾರ್ಗವನ್ನು ಮಂಜೂರು ಮಾಡಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದರು. 

ಕಾಯಂ ಶಿಕ್ಷಕರ ನೇಮಕ: ಮಂಡ್ಯದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಕಾಯಂ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ತಿಳಿಸಿದ್ದಾರೆ.

ಈ ಬಗ್ಗೆ ಕುಮಾರಸ್ವಾಮಿ ಅವರು ಮಾಡಿದ್ದ ಮನವಿಗೆ ಸ್ಪಂದಿಸಿರುವ ಅವರು, ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT