ಬೆಂಗಳೂರು: ಬಿಜೆಪಿಯೊಂದಿಗೆ ಮತ್ತೊಮ್ಮೆ ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಕುಮಾರಸ್ವಾಮಿರವರನ್ನು ತಮ್ಮ ಕುಟುಂಬದಿಂದ ಬಹಿಷ್ಕರಿಸುತ್ತೇವೆ ಎಂದು ಎಚ್.ಡಿ ದೇವೇಗೌಡರು ಹೇಳಿದ್ದರು. ಇದೀಗ ಬಹಿಷ್ಕರಿಸುವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್, ಹಿಂದೆ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ನಂತರ ಕುಮಾರಸ್ವಾಮಿಯವರು ಹಾಗೂ ದೇವೇಗೌಡರು ಪಶ್ಚಾತಾಪದ ಮಾತುಗಳನ್ನು ಆಡಿದ್ದರು. ಮತ್ತೊಮ್ಮೆ ಜೆಡಿಎಸ್ ಬಿಜೆಪಿಯೊಂದಿಗೆ ಹೋದರೆ ಕುಮಾರಸ್ವಾಮಿಯವರನ್ನು ತಮ್ಮ ಕುಟುಂಬದಿಂದ ಬಹಿಷ್ಕರಿಸುತ್ತೇವೆ ಎಂದಿದ್ದರು. ಈಗ ಬಹಿಷ್ಕರಿಸುವರೇ?, ಎಂದು ವ್ಯಂಗ್ಯವಾಡಿದೆ.

ಕಳೆದ ಬಾರಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ನಂತರ ಕುಮಾರಸ್ವಾಮಿಯವರು ದೇವೇಗೌಡರ ಅಭಿಪ್ರಾಯದ ವಿರುದ್ಧ ಹೋಗಿದ್ದರು. ಈಗ ಜೆಡಿಎಸ್ ಶಾಸಕರ ಅಭಿಪ್ರಾಯದ ವಿರುದ್ಧ, ಕಾರ್ಯಕರ್ತರ ವಿರುದ್ಧ, ಮುಖಂಡರ ವಿರುದ್ಧ, ಅಲ್ಪಸಂಖ್ಯಾತರ ಸಮುದಾಯದ ವಿರುದ್ಧ ಹೋಗಿದ್ದಾರೆ. ಇದೀಗ ದೇವೇಗೌಡರು ಬಹಿಷ್ಕಾರ ಮಾಡದಿರಬಹುದು. ಆದರೆ ಜೆಡಿಎಸ್ ಪಕ್ಷವನ್ನು ರಾಜ್ಯದ ಜನತೆ ಬಹಿಷ್ಕರಿಸಲಿದ್ದಾರೆ ಎಂದು ಕುಟುಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.