ಶನಿವಾರ, 29 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ವೇತನ ಆಯೋಗದ ವರದಿ ಶೀಘ್ರ ಅನುಷ್ಠಾನ: ಸಿದ್ದರಾಮಯ್ಯ

Published 26 ಜೂನ್ 2024, 15:25 IST
Last Updated 26 ಜೂನ್ 2024, 15:25 IST
ಅಕ್ಷರ ಗಾತ್ರ

ಬೆಂಗಳೂರು: ‘ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆಯೋಗದ ವರದಿಯನ್ನು ಆದಷ್ಟು ಶೀಘ್ರ ಅನುಷ್ಠಾನಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮತ್ತು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್. ಬೈರಪ್ಪ ಅವರು ಮುಖ್ಯಮಂತ್ರಿಯವರನ್ನು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡಿ, ಏಳನೇ ವೇತನ ಆಯೋಗ ವರದಿಯ ಶಿಫಾರಸುಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿದರು.

ಅಲ್ಲದೆ, ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವಂತೆ ಮನವಿ ಮಾಡಿದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಸರ್ಕಾರವು ರಾಜ್ಯ ಸರ್ಕಾರಿ ನೌಕರರ ಮತ್ತು ನಿವೃತ್ತ ನೌಕರರ ಪರವಾಗಿದೆ. ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ.‌ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ’ ಎಂದರು.

ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT