ರಾಮನಗರ: ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಹಾಗೂ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರ ನಡುವಿನ ಮುನಿಸು ಸ್ಪೋಟಗೊಂಡಿದೆ. ‘ಈ ಬಾರಿ ಕ್ಷೇತ್ರದಲ್ಲಿ ರೇವಣ್ಣರಿಗೇ ಟಿಕೆಟ್ ಕೊಡಿ’ ಎಂದು ಬಾಲಕೃಷ್ಣ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕೃಷ್ಣ ಕಾಂಗ್ರೆಸ್ ತೊರೆಯುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದು, ಇದನ್ನು ಸ್ವತಃ ಅವರೇ ನಿರಾಕರಿಸಿದ್ದಾರೆ.

ಈ ಮಧ್ಯೆ ಬಾಲಕೃಷ್ಣ ಅವರಿಗೆ ಜೆಡಿಎಸ್–ಬಿಜೆಪಿಯಿಂದಲೂ ಆಹ್ವಾನ ಬಂದಿದೆ ಎಂದೆಲ್ಲ ವದಂತಿಗಳು ಹಬ್ಬಿವೆ. ಆದರೆ ಇದನ್ನೆಲ್ಲ ಅವರು ತಳ್ಳಿಹಾಕಿದ್ದು, ‘ ದೇವರಾಣೆಗೂ ನಾನು ಕಾಂಗ್ರೆಸ್ ಬಿಡುವುದಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

‘ ಜೆಡಿಎಸ್ನಿಂದ ಆಹ್ವಾನ ಬಂದಿದ್ದು ನಿಜ. ಆದರೆ ಅದನ್ನು ನಿರಾಕರಿಸಿದ್ದೇನೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷ ಬದಲಿಸುತ್ತಲೇ ಇದ್ದರೆ ಜನಪ್ರತಿನಿಧಿಗಳಿಗೆ ಬೆಲೆ ಇರುವುದಿಲ್ಲ. ನಾನು ಕಾಂಗ್ರೆಸ್ನಲ್ಲೇ ಇದ್ದು, ರೇವಣ್ಣರನ್ನು ಬೆಂಬಲಿಸಲು ಸಿದ್ಧನಿದ್ದೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.