ಬೆಂಗಳೂರು: ಹುಣಸಮಾರನಹಳ್ಳಿ ಹಾಗೂ ಸೊಣ್ಣಪ್ಪನಹಳ್ಳಿ ಗ್ರಾಮದ 4 ಎಕರೆ 5 ಗುಂಟೆ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ನಡೆದ ಬಗ್ಗೆ ವರದಿ ಸಿದ್ಧಪಡಿಸಿದ್ದ ಹಿರಿಯ ಭೂ ವಿಜ್ಞಾನಿ ಪ್ರತಿಮಾ, ₹25.35 ಲಕ್ಷ ನಷ್ಟ ಆಗಿರುವುದಾಗಿ ಉಲ್ಲೇಖಿಸಿದ್ದರು ಎಂಬುದು ಗೊತ್ತಾಗಿದೆ.

ಹುಣಸಮಾರನಹಳ್ಳಿ ಗ್ರಾಮದ ಸರ್ವೇ ನಂಬರ್ 177/3, 178/1–2–3, 179 ಮತ್ತು ಸೊಣ್ಣಪ್ಪನಹಳ್ಳಿ ಗ್ರಾಮದ ಸರ್ವೇ ನಂಬರ್ 34/1–2–3 ಹಾಗೂ ಸರ್ವೇ ನಂಬರ್ 17/7–8–9 ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ್ದ ಆರೋಪದಡಿ ಶಾಸಕರೊಬ್ಬರು ಸೇರಿ ನಾಲ್ವರ ವಿರುದ್ಧ ಚಿಕ್ಕಜಾಲ ಠಾಣೆಯಲ್ಲಿ ಜುಲೈನಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದರ ತನಿಖೆ ಪ್ರಗತಿಯಲ್ಲಿದೆ.

ಅಕ್ರಮ ಗಣಿಗಾರಿಕೆ ನಡೆದಿದೆ ಎನ್ನಲಾದ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ವರದಿ ಸಿದ್ಧಪಡಿಸಿದ್ದರು. ಜೊತೆಗೆ, ಅಕ್ರಮ ಗಣಿಗಾರಿಕೆ ನಡೆಸಿದ್ದ ಆರೋಪದಡಿ ಶಾಸಕ ಸೇರಿ ಇಬ್ಬರ ವಿರುದ್ಧ ದೇವನಹಳ್ಳಿಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ಸಹ ದಾಖಲಿಸಿದ್ದರು.

ಇದೇ ಪ್ರಕರಣದಲ್ಲಿ ಪ್ರತಿಮಾ ಅವರು ನೀಡಿದ್ದ ಸ್ಥಳ ಪರಿಶೀಲನೆ ವರದಿಯ ಪ್ರತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಜೊತೆಗೆ, ಪ್ರತಿಮಾ ಅವರ ವರದಿಯನ್ನು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಪಡೆದಿದ್ದ ವ್ಯಕ್ತಿಯೊಬ್ಬರು ಅದನ್ನು ಈಗ ಹಂಚಿಕೊಂಡಿದ್ದಾರೆ

‘4 ಎಕರೆ 5 ಗುಂಟೆ ಜಮೀನಿನಲ್ಲಿ ಅನುಮತಿ ಇಲ್ಲದೇ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗಿದೆ. 4 ಪ್ರದೇಶಗಳಲ್ಲಿ 51,460 ಟನ್ ಪ್ರಮಾಣದ ಭೂ ಅಗೆತ ಮಾಡಲಾಗಿದೆ. ಸ್ಥಳದಲ್ಲಿ 5,000 ಟನ್ ಕಟ್ಟಡ ಕಲ್ಲಿನ ದಾಸ್ತಾನು ಇದೆ. 25,876 ಟನ್ ಕಟ್ಟಡ ಕಲ್ಲು ಬೇರೆಡೆ ಸಾಗಿಸಲಾಗಿದೆ. ಇದರಿಂದಾಗಿ ಸರ್ಕಾರಕ್ಕೆ ₹25.35 ಲಕ್ಷ ನಷ್ಟವಾಗಿದೆ’ ಎಂದು ಪ್ರತಿಮಾ ಅವರು ವರದಿಯಲ್ಲಿ ಉಲ್ಲೇಖಿಸಿದ್ದರು.
.ಭೂ ವಿಜ್ಞಾನಿ ಪ್ರತಿಮಾ ಕೊಲೆ: ಉಸಿರುಗಟ್ಟಿಸಿ ಚಾಕುವಿನಿಂದ ಕತ್ತು ಕೊಯ್ದು ಹತ್ಯೆ.KS ಪ್ರತಿಮಾ ಕೊಲೆ:ಎಲ್ಲಾ ಆಯಾಮಗಳಲ್ಲೂ ತನಿಖೆ ಎಂದ ಸಚಿವ SSM.ಗಣಿ ಇಲಾಖೆ ಭೂವಿಜ್ಞಾನಿ ಪ್ರತಿಮಾ ಕೊಲೆ: ಬಾಗಿಲು ಬಳಿ ಬಿದ್ದಿದ್ದ ಬ್ಯಾಗ್, ಕನ್ನಡಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.