ಬೆಂಗಳೂರು: ‘ಪತ್ರಿಕಾ ವಿತರಕರ ಬೇಡಿಕೆಗಳಿಗೆ ಸರ್ಕಾರ ಪೂರಕವಾಗಿ ಸ್ಪಂದಿಸಲಿದೆ’ ಎಂದು ವಾರ್ತಾ ಇಲಾಖೆ ಆಯುಕ್ತ ಡಾ. ಪಿ.ಎಸ್.ಹರ್ಷ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ವಿಶ್ವ ಪತ್ರಿಕಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪತ್ರಿಕಾ ವಿತರಕರಿಗೆ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಸಂಬಂಧಪಟ್ಟ ಇಲಾಖೆಗಳ ಜತೆ ಚರ್ಚಿಸಲಾಗುತ್ತಿದೆ.ವಾರ್ತಾ ಇಲಾಖೆಯು ಕಾರ್ಮಿಕ ಇಲಾಖೆ ಜತೆ ಸಂಪರ್ಕದಲ್ಲಿದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಪತ್ರಿಕಾ ವಿತರಕರ ಸಂಖ್ಯೆ ದೊಡ್ಡದು.ಸರ್ಕಾರ ವಿತರಕರ ಜತೆಗಿದೆ. ಸೌಲಭ್ಯ ಕಲ್ಪಿಸಲು ಅನುದಾನದ ಕೊರತೆ ಇಲ್ಲ’ ಎಂದು ತಿಳಿಸಿದರು.

ಪಾವಗಡದ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಮಹಾರಾಜ್ ಮಾತನಾಡಿ, ‘ರಾಜ್ಯದಲ್ಲಿ 70ಸಾವಿರಕ್ಕೂ ಹೆಚ್ಚು ಪತ್ರಿಕಾ ವಿತರಕರಿದ್ದಾರೆ. ಎಲ್ಲ ವಿತರಕರು ಸಂಘಟಿತರಾಗಿ ಹೋರಾಟ ನಡೆಸುವ ಮೂಲಕ ಸೌಲಭ್ಯಗಳನ್ನು ಪಡೆಯಬೇಕು’ ಎಂದು ಹೇಳಿದರು.

ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ. ಶಂಭುಲಿಂಗಅವರು ಬೇಡಿಕೆಗಳ ಮನವಿ ಪತ್ರವನ್ನುಪಿ.ಎಸ್. ಹರ್ಷಗೆ ಸಲ್ಲಿಸಿದರು. ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಇದ್ದರು.

ಪತ್ರಿಕಾ ವಿತರಕರ ಬೇಡಿಕೆಗಳು

* ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆ.

* ಕೆಲಸದ ವೇಳೆಯಲ್ಲಿ ಮೃತಪಟ್ಟರೆ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಬೇಕು.

* ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ನೀಡಬೇಕು.

* ವೈದ್ಯಕೀಯ ಚಿಕಿತ್ಸೆ ಮತ್ತು ಅಪಘಾತದ ಪರಿಹಾರ ಮತ್ತು ಪ್ರಮುಖ ಕಾಯಿಲೆಗಳಿಗೆ ಚಿಕಿತ್ಸೆಗಾಗಿ ಸರ್ಕಾರದಿಂದ ಪರಿಹಾರ ಕಂಡುಕೊಳ್ಳಲು ಸಹಾಯ ನೀಡಬೇಕು.

* ಪತ್ರಿಕೆ ಹಂಚುವ ವಿತರಕರಿಗೆ ಎಲೆಕ್ಟ್ರಿಕ್ ಬೈಕ್ ಖರೀದಿಸಲು ಸಬ್ಸಿಡಿ ರೂಪದಲ್ಲಿ ಸಹಾಯಧನ ನೀಡಬೇಕು ಹಾಗೂ ಶೂನ್ಯ ಬಡ್ಡಿದರದಲ್ಲಿ ವಾಹನ ಖರೀದಿಸಲು ಸಹಾಯಧನ ನೀಡಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.