ಬೆಂಗಳೂರು: ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ನ ಪ್ರಧಾನ ಸಂಪಾದಕ ರವಿ ಬೆಳಗೆರೆ (62) ಶುಕ್ರವಾರ ಬೆಳಗಿನ ಜಾವ ನಿಧನರಾದರು.

ಹೃದಯಾಘಾತದಿಂದ ಅವರು ನಿಧನರಾದರು. 1995ರಲ್ಲಿ ಹಾಯ್ ಬೆಂಗಳೂರು ಆರಂಭಿಸಿದ್ದರು. ಕಾದಂಬರಿ, ಅನುವಾದ, ಕಥಾ ಸಂಕಲನ, ಅಂಕಣ ಬರಹಗಳು, ಜೀವನ ಕಥನ ಒಳಗೊಂಡ ಅವರ ಸುಮಾರು 70 ಪುಸ್ತಕಗಳು ಪ್ರಕಟಗೊಂಡಿವೆ.

ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ.

ಪ್ರಾರ್ಥನಾ ಶಾಲೆ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದಾಗಿ ತಿಳಿದು ಬಂದಿದೆ. ಅವರಿಗೆ ಇಬ್ಬರು ಪತ್ನಿಯರು, ಇಬ್ಬರು ಪುತ್ರಿಯರು ಹಾಗೂ ಇಬ್ಬರು ಪುತ್ರರು ಇದ್ದಾರೆ. ತಡರಾತ್ರಿ ಹೃದಯಾಘಾತ ಆದಾಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧರಾದರು. ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದೆ.

ಚಿತ್ರ ಕೃಪೆ: ರವಿ ಬೆಳಗೆರೆ ಅವರ ಫೇಸ್ಬುಕ್ ಖಾತೆ

ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ ಮಾಡಿದ್ದ ಅವರು ಪತ್ರಿಕೋದ್ಯಮದ ಕಡೆಗೆ ಹೊರಳಿದರು. ಸಾಹಿತ್ಯ, ಕ್ರೈಂ ಕಾರ್ಯಕ್ರಮಗಳ ನಿರೂಪಣೆ, ಓ ಮನಸೇ ಮೂಲಕ ಜನಪ್ರಿಯರಾದರು. ಅವರು ಬೆಂಗಳೂರಿನಲ್ಲಿ ಪ್ರಾರ್ಥನಾ ಶಾಲೆ ಕಟ್ಟಿ ಬೆಳೆಸಿದ್ದಾರೆ.

ಜನನ: 1958 ಮಾರ್ಚ್ 15

ಊರು: ಬಳ್ಳಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.