ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿದ್ದ ಲೇಖಕ ದೇವನೂರ ಮಹಾದೇವ ಅವರು, ತಮ್ಮ ಲೇಖನವನ್ನು ಪಠ್ಯಕ್ಕೆ ಸೇರಿಸುವುದಕ್ಕೆ ಅನುಮತಿ ನಿರಾಕರಿಸಿರುವುದಾಗಿ ತಿಳಿಸಿದ್ದರು.

ಅದರ ಹೊರತಾಗಿಯೂ, ಪರಷ್ಕೃತ ಪಠ್ಯವೇ ಜಾರಿಯಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿರುವುದಕ್ಕೆ ದೇವನೂರ ಮಹಾದೇವ ಆಕ್ಷೇಪಿಸಿದ್ದಾರೆ. ಈ ಬಗ್ಗೆ ಸಚಿವರಿಗೆ ಪತ್ರ ಬರೆದಿರುವ ಅವರು, ಸರ್ಕಾರದ ಈ ಧೋರಣೆ ದಬ್ಬಾಳಿಕೆ ಎನಿಸಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ ದೇವನೂರ ಮಹಾದೇವ

ದೇವನೂರ ಮಹದೇವ ಅವರ ಪತ್ರದ ಒಕ್ಕಣೆ ಇಲ್ಲಿದೆ..

'ಈ ಹಿಂದೆ, ಹತ್ತನೇ ತರಗತಿಯ ಪಠ್ಯ ಪುಸ್ತಕದಲ್ಲಿರುವ ನನ್ನ ಪಠ್ಯವನ್ನು ಕೈ ಬಿಡಬೇಕೆಂದು ತಮಗೆ ವಿಂತಿಸಿ ದಿನಾಂಕ 26.05.2022ರಂದು ಪತ್ರ ಬರೆದು, ಕೊರಿಯರ್ ಮುಖಾಂತರ ರವಾನಿಸಿದ್ದೆ.ಅದನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೂ ಬರೆದು ಕೊರಿಯರ್ ಮಾಡಿದ್ದೆ. ಆ ಪತ್ರದಲ್ಲಿ ನಾನು ಒಪ್ಪಿಗೆ ಇಲ್ಲದಿರುವುದಕ್ಕೆ ಸ್ಪಷ್ಟನೆ ನೀಡಿದ್ದೇನೆ. ಹೀಗಿದ್ದೂ ನನ್ನ ಮನವಿಯನ್ನು ತಾವು ಪರಿಗಣಿಸದೆ, ಇತ್ತೀಚಿನ ತಮ್ಮ ಹೇಳಿಕೆಯಲ್ಲಿ 'ಪರಿಷ್ಕೃತ ಮುದ್ರಣವೇ ಜಾರಿಗೆ ಬರುತ್ತದೆ' ಎಂದಿದ್ದೀರಿ. ಕ್ಷಮಿಸಿ, ನಿಮ್ಮ ಈ ಧೋರಣೆ ನನಗೆ ದಬ್ಬಾಳಿಕೆ ಅನ್ನಿಸಿಬಿಟ್ಟಿತು'

'ಮತ್ತೂ ಹೇಳಬೇಕೆಂದರೆ, ಚತುರ್ವರ್ಣ ವಿರೋಧಿ ಬಸವಣ್ಣನವರ ಪಾಠವನ್ನು ಪಠ್ಯಪುಸ್ತಕಪರಿಷ್ಕರಣಾ ಸಮಿತಿ ಕತ್ತು ಹಿಚುಕಿರುವುದು, ಕುವೆಂಪು, ಅಂಬೇಡ್ಕರ್ ಅವರನ್ನು ಗೇಲಿ ಮಾಡುವ ಮನಸ್ಥಿತಿಯ ವ್ಯಕ್ತಿಯನ್ನೇ ಪಠ್ಯಪುಸ್ತಕ ಪರಿಷ್ಕರಣೆಗೆ ಅಧ್ಯಕ್ಷನನ್ನಾಗಿಸಿರುವುದು ಹಾಗೂ ಒಂದು ಒಕ್ಕೂಟ ಸರ್ಕಾರದಲ್ಲಿ ಆ ಒಕ್ಕೂಟದ ಅಂಗವಾಗಿರುವ ಕರ್ನಾಟಕ ರಾಜ್ಯ ತನಗೂ ಒ೦ದು ಧ್ವಜವೂ ಬೇಕು ಎಂದು ದನಿ ಎತ್ತಿದ ಸಂದರ್ಭದಲ್ಲಿ ಆ ಪರಿಕಲ್ಪನೆಯನ್ನು ತನ್ನ ಅ೦ಗೋಟಿಗೆ ಹೋಲಿಕೆ ಮಾಡಿದ ಹಿನಅಭಿರುಚಿಯ ವ್ಯಕ್ತಿಯನ್ನು ಮಕ್ಕಳ ಪಠ್ಯ ಪರಿಷ್ಕರಣೆ ಮಾಡಲು ಅಧ್ಯಕ್ಷನನ್ನಾಗಿಸಿರುವುದು ಮತ್ತು ಸಮರ್ಥಿಸುತ್ತಿರುವುದು, ಭಿನ್ನಾಭಿಪ್ರಾಯಗಳನ್ನು ಟೂಲ್‌ಕಿಟ್ ಎಂದು ರಾಜಕೀಯಗೊಳಿಸಿ ಪರಾರಿಯಾಗಲು ನೋಡುವುದು ಇವೆಲ್ಲ ಹಾಗೂ ನಾಡಿನ ಗಣ್ಯರು, ಮಠಾಧಿಪತಿಗಳು, ಲೇಖಕರು, ಪ್ರಜ್ಞಾವಂತರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲುಕಸ ಮಾಡಿ ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನ್ನಿಸುತ್ತದೆ'

'ಕೊನೆಯದಾಗಿ ತಮ್ಮಲ್ಲಿ ಒಂದು ವಿನಂತಿ. ಇದು ಮುಂದುವರಿಯಬಾರದು. ದಯವಿಟ್ಟು ಮುಂದುವರಿದಯಬಾರದು' ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ದೇವನೂರ ಮಹಾದೇವ ಯಾವ ಒತ್ತಡದಲ್ಲಿ ಹೇಳಿದ್ದಾರೋ ತಿಳಿಯದು: ಸಚಿವ ನಾಗೇಶ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.