ವಿಜಯಪುರ: ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಅಸಹಕಾರ ತೋರಿದ ಮನಸ್ಸುಗಳ ಒಳಸಂಚು ಮತ್ತು ಕುತಂತ್ರದಿಂದ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ವಿರೋಧ ಪಕ್ಷದ ಸ್ಥಾನ ಕೈತಪ್ಪಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಯತ್ನಾಳ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡಬೇಕು ಎಂದು ಸಮಾಜ ಕೇಳಿರಲಿಲ್ಲ. ಬಿಜೆಪಿಯಲ್ಲಿ ಯತ್ನಾಳ ಅವರಷ್ಟು ಜನಪ್ರಿಯ ನಾಯಕ ಸದ್ಯ ಯಾರೂ ಇರಲಿಲ್ಲ. ರಾಜ್ಯದ ಬಹುತೇಕ ಜನ ಯತ್ನಾಳ ವಿರೋಧ ಪಕ್ಷದ ನಾಯಕ ಆಗುತ್ತಾರೆ ಎಂಬ ಅಪೇಕ್ಷೆ ಪಟ್ಟಿದ್ದರು. ಆದರೆ, ಒಳಸಂಚಿನಿಂದಾಗಿ ಅವರಿಗೆ ಕೊನೇ ಗಳಿಗೆಯಲ್ಲಿ ಅನ್ಯಾಯವಾಗಿದೆ ಎಂದರು.
.ನ ದೈನ್ಯಂ, ನ ಪಲಾಯನಂ: ಬಸನಗೌಡ ಯತ್ನಾಳ್ ಹೀಗೆ ಹೇಳಿದ್ದೇಕೆ?.
ಯತ್ನಾಳ ಅವರಿಗೆ ಅನ್ಯಾಯ ಆಗಿರುವುದರಿಂದ ಸಮಾಜದಲ್ಲಿ ದೊಡ್ಡ ಅಸಮಾದಾನ ಉಂಟಾಗಿದೆ. ಸಮಾಜದವರು ಸೇರಿದಂತೆ ಉತ್ತರ ಕರ್ನಾಟಕದವರು ಈ ಬಗ್ಗೆ ವಿರೋಧ ವ್ಯಕ್ತಪಡಿಸಬೇಕು ಎಂದು ಕರೆ ನೀಡಿದರು.

ಉತ್ತರ ಕರ್ನಾಟಕ ಭಾಗದ ಲಿಂಗಾಯತ ನಾಯಕರನ್ನು ಅದರಲ್ಲೂ ವಿಶೇಷವಾಗಿ ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿ ಇದ್ದರವನ್ನು ಬಿಜೆಪಿ ಮತ್ತು ಕಾಂಗ್ರೆಸ್ ಕಡೆಗಣಿಸುತ್ತಾ ಬಂದಿವೆ ಎಂದು ದೂರಿದರು.
.ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭಕ್ಕೂ ಮೊದಲೇ ಹೊರನಡೆದ ಯತ್ನಾಳ, ರಮೇಶ ಜಾರಕಿಹೊಳಿ.
ಸರ್ಕಾರಕ್ಕೆ ಗಡುವು

ಬೆಳಗಾವಿಯಲ್ಲಿ ಡಿಸೆಂಬರ್ನಲ್ಲಿ ನಡೆಯಲಿರುವ ವಿಧಾನಸಭಾ ಅಧಿವೇಶನಕ್ಕೂ ಮೊದಲು ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟಗಾರರು, ನಾಯಕರ ಜೊತೆ ಮಾತುಕತೆ ನಡೆಸಿ, ಇರುವಂತ ಕಾನೂನು ಅಡೆತಡೆಯನ್ನು ನಿವಾರಿಸಿ, ನ್ಯಾಯ ಕೊಡಿಸುವ ಭರವಸೆ ನೀಡಬೇಕು ಎಂದು ಆಗ್ರಹಿಸಿದರು.

ಸರ್ಕಾರ ಯಾವುದೇ ಸ್ಪಂದನೆ ನೀಡದೇ ಇದ್ದರೇ ವಿಧಾನಸೌಧದ ಆವರಣದಲ್ಲಿ ಇಷ್ಟಲಿಂಗ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಲೋಕಸಭಾ ಚುನಾವಣೆ ಒಳಗಾಗಿ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ 2 ‘ಎ’ ಮೀಸಲಾತಿ ಕಲ್ಪಿಸಬೇಕು ಹಾಗೂ ಎಲ್ಲ ಲಿಂಗಾಯತರನ್ನು ಕೇಂದ್ರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು
.ಬಿ.ವೈ.ವಿಜಯೇಂದ್ರ ನನ್ನ ಮನೆಗೆ ಕಾಲಿಡುವುದು ಬೇಡ: ಶಾಸಕ ಬಸನಗೌಡ ಪಾಟೀಲ ಯತ್ನಾಳ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.