ಬೆಂಗಳೂರು:ಅಧಿಕಾರದಲ್ಲಿದ್ದರೂ ಅಷ್ಟಾಗಿ ನಗುಮೊಖ ತೋರದ, ಅಧಿಕಾರ ಇಲ್ಲವೆಂದು ಕೈಕಟ್ಟಿ ಕೂರದ ಯಡಿಯೂರಪ್ಪನವರ ನಗುಮೊಗದ ಫೋಟೊಗಳು ಇಲ್ಲವೇ ಇಲ್ಲ ಎನ್ನುವಷ್ಟು ಅಪರೂಪ. ಸಾರ್ವಜನಿಕ ಬದುಕಿನಲ್ಲಿ ಆರಂಭದ ದಿನಗಳಿಂದಲೂ ರೈತಪರ ದನಿಯಾಗಿ ಗುರುತಿಸಿಕೊಂಡ ಈ ನಾಯಕನ ಬದುಕು ಸಾಗಿಬಂದ ಹಾದಿಯ ಪರಿಚಯ ಇಲ್ಲಿದೆ.

ಪ್ರಮಾಣ ವಚನ ಸ್ವೀಕಾರದ ತಾಜಾ ಅಪ್ಡೇಟ್ಸ್ಗೆhttp://bit.ly/2OkdMQEಲಿಂಕ್ ಕ್ಲಿಕ್ ಮಾಡಿ

ಹುಟ್ಟೂರು ಬೂಕನಕೆರೆ

ಹೋರಾಟದಿಂದೇ ರಾಜಕಾರಣದಲ್ಲಿ ಹೆಜ್ಜೆಗುರುತು ಮೂಡಿಸಿದ ಬಿ.ಎಸ್.ಯಡಿಯೂರಪ್ಪ (ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ) ಅವರ ಹುಟ್ಟೂರು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ಬೂಕನಕೆರೆ. ಕೃಷಿಕರಾದ ಸಿದ್ದಲಿಂಗಪ್ಪ ಹಾಗೂ ಪುಟ್ಟತಾಯಮ್ಮ ತಂದೆ-ತಾಯಿ. ಈ ಕುಟುಂಬ ಕೆಲಸಕ್ಕಾಗಿ ಶಿಕಾರಿಪುರಕ್ಕೆ ಬಂತು. ಅದು ಮುಂದೆ ಅವರ ರಾಜಕೀಯ ಕಾರ್ಯಕ್ಷೇತ್ರವೂ ಆಯಿತು. ಅದೇ ಊರಿನ ಮೈತ್ರಾದೇವಿ ಕೈಹಿಡಿದು ಶಿಕಾರಿಪುರದ ಅಳಿಯ ಎನಿಸಿಕೊಂಡರು.

ಇದನ್ನೂ ಓದಿ: ಯಡಿಯೂರಪ್ಪ ನಡೆದು ಬಂದ ಹಾದಿ

ಇಪ್ಪತ್ತೆರಡು ವರ್ಷದವರಿದ್ದಾಗ ಆರ್ಎಸ್ಎಸ್ ಸೇರಿದರು. ಹೋರಾಟ- ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು 1970ರಲ್ಲಿ ಶಿಕಾರಿಪುರ ತಾಲ್ಲೂಕು ಕಾರ್ಯವಾಹರಾಗಿ (ಕಾರ್ಯದರ್ಶಿ) ನೇಮಕಗೊಂಡರು. 1972ರಲ್ಲಿ ಜನಸಂಘದ ತಾಲ್ಲೂಕು ಅಧ್ಯಕ್ಷರೂ ಆದರು.1975ರಲ್ಲಿ ಶಿಕಾರಿಪುರ ಪುರಸಭೆ ಸದಸ್ಯರಾದರು. ಎರಡೇ ವರ್ಷದಲ್ಲಿ ಅಧ್ಯಕ್ಷ ಪಟ್ಟವೂ ಸಿಕ್ಕಿತು. 1977ರಲ್ಲಿ ಜನಸಂಘದ ತಾಲ್ಲೂಕು ಕಾರ್ಯದರ್ಶಿಯಾಗಿ ಆಯ್ಕೆಯಾದರು. 1980ರಲ್ಲಿ ಬಿಜೆಪಿತಾಲ್ಲೂಕು ಘಟಕದ ಅಧ್ಯಕ್ಷರಾಗಿ ನೇಮಕವಾದರು.

1983ರಲ್ಲಿ ಶಿಕಾರಿಪುರದಿಂದ ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿ, ರಾಮಕೃಷ್ಣ ಹೆಗಡೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ಘೋಷಿಸಿ ರೈತರ ಸಾಲ ಮನ್ನಾ ಮಾಡಿಸಲು ಹೋರಾಡಿದ್ದರು. 1985ರಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡರು. 1988ರಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದರು. ಇವರ ಸಂಘಟನಾ ಚಾತುರ್ಯ ಗಮನಿಸಿದ ಬಿಜೆಪಿಯು 1992ರಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಜವಾಬ್ದಾರಿ ವಹಿಸಿತ್ತು. 1994ರಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಹೆಸರು ಪಡೆದರು.

1995ರಲ್ಲಿ 2ನೇ ಬಾರಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡರು. 1999ರ ವಿಧಾನಸಭೆ ಚುನಾವಣೆಯಲ್ಲಿ ಸೋಲಾಯಿತು. ಆದರೆ, ಅದೇ ವರ್ಷ ಪಕ್ಷ ಅವರನ್ನು ವಿಧಾನ ಪರಿಷತ್ಗೆ ನೇಮಕ ಮಾಡಿತು. 2003ರಲ್ಲಿ ಬಿಜೆಪಿ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದರು. 2004ರಲ್ಲಿ 2ನೇ ಬಾರಿ ಪ್ರತಿಪಕ್ಷ ನಾಯಕನಾಗುವ ಅವಕಾಶ ಅವರಿಗೇ ಒದಗಿಬಂತು.

2004ರಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್-ಜೆಡಿಎಸ್ ಸರ್ಕಾರ 20ತಿಂಗಳಲ್ಲಿ ಪತನವಾದ ನಂತರ ಕುಮಾರಸ್ವಾಮಿ ಜತೆ ದೋಸ್ತಿ ಕುದುರಿಸಿ ಹೊಸ ಸರ್ಕಾರ ರಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು. 2006ರಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾದರು.

2007ರಲ್ಲಿ 7 ದಿನದ ಮುಖ್ಯಮಂತ್ರಿ

ನವೆಂಬರ್ 12, 2007ರಂದು ರಾಜ್ಯದ 26ನೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದರು.ಜೆಡಿಎಸ್ ಬೆಂಬಲ ನೀಡದ ಕಾರಣ ವಿಶ್ವಾಸಮತ ಸಾಬೀತುಪಡಿಸಲು ಸಾದ್ಯವಾಗದೇ ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳಬೇಕಾಯತು.ಈ ಪ್ರಸಂಗದಲ್ಲಿ ಕುಮಾರಸ್ವಾಮಿ ಅವರಿಗೆ ‘ವಚನಭ್ರಷ್ಟ’ ಹಣೆಪಟ್ಟಿ ಅಂಟಿಕೊಂಡಿತು. ಜೆಡಿಎಸ್ ‘ವಿಶ್ವಾಸದ್ರೋಹ’ವನ್ನೇ ಚುನಾವಣೆಯ ಯಡಿಯೂರಪ್ಪ ಚುನಾವಣೆ ವಿಷಯವಾಗಿಸಿದರು.

ಇದನ್ನೂ ಓದಿ: ಸೆರೆಮನೆಗೆ ಯಡಿಯೂರಪ್ಪ

ಮತ್ತೆ ಒಲಿಯಿತು ಅಧಿಕಾರ

2008ರ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ110 ಸ್ಥಾನ ಗಳಿಸಿ ದೊಡ್ಡಪಕ್ಷವಾಗಿ ಹೊರಹೊಮ್ಮಿತು.ಆರು ಪಕ್ಷೇತರ ಶಾಸಕರ ನೆರವಿನಿಂದ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದರು. ಸ್ವಂತ ಬಲದ ಮೇಲೆ ದಕ್ಷಿಣ ಭಾರತದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸಿ ಇತಿಹಾಸ ಬರೆಯಿತು. ಸರ್ಕಾರವನ್ನು ಭದ್ರಪಡಿಸಿಕೊಳ್ಳಬೇಕು ಎನ್ನುವ ಆಶಯದಲ್ಲಿ ಶುರು ಮಾಡಿದ ‘ಆಪರೇಷನ್ ಕಮಲ’ ಮುಂದಿನ ದಿನಗಳಲ್ಲಿ ಕೆಟ್ಟ ಪರಂಪರೆಗೆ ನಾಂದಿ ಹಾಡಿತು.

ಸಂಖ್ಯಾಬಲದಿಂದ ಸರ್ಕಾರ ಸುಭದ್ರವಾಗಿದ್ದರೂಆಂತರಿಕ ಭಿನ್ನಮತ ಯಡಿಯೂರಪ್ಪ ಅವರನ್ನು ಹೈರಾಣಾಗಿಸಿತ್ತು.ಪ್ರತಿಪಕ್ಷಗಳ ಹದ್ದಿನಕಣ್ಣು, ಬಿಡುಗಡೆಯಾಗುತ್ತಿದ್ದ ಸಾಲುಸಾಲು ಅವ್ಯವಹಾರದ ದಾಖಲೆಗಳನ್ನು ಎದುರಿಸಲು ಯಡಿಯೂರಪ್ಪ ಸಾಕಷ್ಟು ಬುದ್ಧಿವಂತಿಕೆ ವ್ಯಯಿಸಬೇಕಾಗಿ ಬಂತು.ಲೋಕಾಯುಕ್ತ ವರದಿಯಲ್ಲಿ ಹೆಸರು ಪ್ರಸ್ತಾಪವಾದ ಕಾರಣ ಜುಲೈ 31, 2011ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆರಾಜೀನಾಮೆ ಕೊಟ್ಟರು. ಆಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ, ತಮ್ಮ ಆಪ್ತಡಿ.ವಿ.ಸದಾನಂದಗೌಡ ಅವರನ್ನು ಮುಖ್ಯಮಂತ್ರಿ ಗಾದಿ ಮೇಲೆ ಕೂರಿಸಿದರು.ಅವರು ಹಿಡಿತಕ್ಕೆ ಸಿಗುತ್ತಿಲ್ಲ ಎನಿಸಿದಾಗ ಪಟ್ಟು ಹಿಡಿದು ಜಗದೀಶ್ ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಮಾಡಿದರು.

ಭ್ರಷ್ಟಾಚಾರ ಆರೋಪವುಳ್ಳ ಖಾಸಗಿ ದೂರಿಗೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ಮತ್ತು ಶಾಸಕ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದಲೋಕಾಯುಕ್ತ ವಿಶೇಷ ನ್ಯಾಯಾಲಯ ಅಕ್ಟೋಬರ್ 15,2011ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಈ ಮೂಲಕರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜೈಲಿಗೆ ಹೋದ ಮಾಜಿ ಮುಖ್ಯಮಂತ್ರಿಎನ್ನುವ ಅಪಕೀರ್ತಿಯೂ ಅವರಿಗೆ ಅಂಟಿಕೊಂಡಿತು.

ಇದನ್ನೂ ಓದಿ: ಯಡಿಯೂರಪ್ಪಗೆ ಮತ್ತೆ ಎದುರಾಗುತ್ತಾ ದಶಕದ ಹಿಂದಿನ ಸವಾಲು?

ಕೆಜೆಪಿ ಸ್ಥಾಪನೆ

ತಮ್ಮ ಪಕ್ಷದಲ್ಲಿನ ಆಂತರಿಕ ಸಮಸ್ಯೆಗಳ ಕಾರಣಕ್ಕೆ ಅಧಿಕಾರ ಕಳೆದುಕೊಂಡ ಯಡಿಯೂರಪ್ಪ 2013ರಲ್ಲಿ ಕೆಜೆಪಿ ಕಟ್ಟಿ ಸಡ್ಡು ಹೊಡೆದರು. ಹೆಚ್ಚು ಸ್ಥಾನಗಳನ್ನು ಗಳಿಸಲು ಸಾಧ್ಯವಾಗದಿದ್ದರೂ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವಲ್ಲಿ ಮಾತ್ರ ಯಶಸ್ವಿಯಾದರು. ರಾಜ್ಯದಲ್ಲಿ ಪಕ್ಷಕ್ಕೆ ಯಡಿಯೂರಪ್ಪ ಅಗತ್ಯ ಎಂಬುದನ್ನು ಮನಗಂಡ ಬಿಜೆಪಿ,ಮತ್ತೆ ಹೋರಾಟಗಾರನಿಗೆ ಬಾಗಿಲು ತೆರೆಯಿತು. 2013ರಲ್ಲಿ ಲೋಕಸಭೆಗೆ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಭವಿಷ್ಯವನ್ನು ಹೊಸದಾಗಿ ಬರೆದುಕೊಂಡರು.

3ನೇ ಬಾರಿಗೆ ಸಿಎಂ: 55 ಗಂಟೆ ಅಧಿಕಾರ

ಹಗಲಿರುಳು ದುಡಿದು ಪಕ್ಷ ಸಂಘಟಿಸಿದ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ 2018ರ ವಿಧಾನಸಭೆ ಚುನಾವಣೆ ಎದುರಿಸಿತು. 104 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ ಬಹುಮತಕ್ಕೆ 9 ಸ್ಥಾನಗಳ ಕೊರತೆ ಎದುರಾಯಿತು.ಈ ನಡುವೆಯೂ ಯಡಿಯೂರಪ್ಪ ರಾಜ್ಯಪಾಲರ ಬಳಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು. ನಿರೀಕ್ಷೆಯಂತೆ ರಾಜ್ಯಪಾಲರು ಆಹ್ವಾನವನ್ನೂ ನೀಡಿ,ಬಹುಮತ ತೋರಿಸಲು 15 ದಿನ ಕಾಲಾವಕಾಶ ನೀಡಿದ್ದರು.

ಮರುದಿನ ‘ಬಿ.ಎಸ್. ಯಡಿಯೂರಪ್ಪ ಹೆಸರಿನ ನಾನು ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದೇನೆ’ ಎಂದು ಸಿಎಂ ಗದ್ದುಗೆ ಏರಿದರು. ಕಾಂಗ್ರೆಸ್–ಜೆಡಿಎಸ್ ಶಾಸಕರನ್ನು ಸೆಳೆದುಕೊಂಡು ವಿಶ್ವಾಸಮತ ಗೆಲ್ಲಬಹುದು ಎನ್ನುವುದು ಯಡಿಯೂರಪ್ಪ ಅವರ ಲೆಕ್ಕಾಚಾರವಾಗಿತ್ತು.

ಆದರೆ, ಬಹುಮತ ಇಲ್ಲದಿದ್ದರೂ ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್–ಜೆಡಿಎಸ್ ನಾಯಕರು ರಾತ್ರೋರಾತ್ರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ನೀಡಿದ್ದ 15 ದಿನಗಳ ಕಾಲಾವಕಾಶದ ಬದಲು ಶನಿವಾರ (ನ.19, 2018)ಸಂಜೆ 4 ಗಂಟೆಗೆಸದನದಲ್ಲಿ ಬಹುಮತ ಸಾಬೀತು ಪಡಿಸಬೇಕು ಎಂದು ಸುಪ್ರೀಂಕೋರ್ಟ್ ಶುಕ್ರವಾರ ನಸುಕಿನಲ್ಲಿ (ನ.18)ಆದೇಶ ನೀಡಿತ್ತು.

ಇದನ್ನೂ ಓದಿ:‘ಮೈತ್ರಿ vs ಬಿಜೆಪಿ’ ಮುಖ್ಯಮಂತ್ರಿ ಕಪ್ ಪಂದ್ಯಾವಳಿ: ಫೈನಲ್ ಹೀಗಾಯ್ತು...

ಕೋರ್ಟ್ ಆದೇಶದಂತೆ, ಶನಿವಾರ (ನ.19) ಬೆಳಿಗ್ಗೆ 11 ಗಂಟೆಗೆ ವಿಧಾನಸಭೆ ಅಧಿವೇಶನ ಆರಂಭಗೊಂಡಿತು. ಹಂಗಾಮಿ ಸ್ಪೀಕರ್ ಕೆ.ಜಿ. ಬೋಪಯ್ಯ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು. ಸಂಜೆ 4 ಗಂಟೆಗೆ ‘ವಿಶ್ವಾಸ ಮತ’ ಸಾಬೀತುಪಡಿಸಲು ಕೋರ್ಟ್ ಸೂಚನೆ ನೀಡಿತ್ತಾದರೂ 3.40ಕ್ಕೆ ಈ ಪ್ರಸ್ತಾವ ಮಂಡಿಸಿದ ಯಡಿಯೂರಪ್ಪ, ಅದುಮಿಟ್ಟ ಆಕ್ರೋಶ, ತೋರಿಸಿಕೊಳ್ಳಲಾಗದ ದುಗುಡ, ಒತ್ತರಿಸಿ ಬರುತ್ತಿದ್ದ ಭಾವೋದ್ವೇಗದ ಮಧ್ಯೆ 22 ನಿಮಿಷಗಳ ವಿದಾಯದ ಭಾಷಣ ಮಾಡಿದರು.

‘ಪ್ರಸ್ತಾವ ವಾಪಸು ಪಡೆಯುತ್ತಿದ್ದೇನೆ’ ಎಂದು ಘೋಷಿಸಿ, ರಾಜ್ಯಪಾಲರಿಗೆ ರಾಜೀನಾಮೆ ನೀಡುವುದಾಗಿ ಸದನಕ್ಕೆ ತಿಳಿಸಿದರು. ಯಡಿಯೂರಪ್ಪ ನೇತೃತ್ವದ ಮೂರು ದಿನಗಳ ಬಿಜೆಪಿ ಸರ್ಕಾರ ವಿಧಾನಸಭೆಯಲ್ಲಿ ವಿಶ್ವಾಸಮತದ ಅಗ್ನಿಪರೀಕ್ಷೆಗೆ ಒಡ್ಡಿಕೊಳ್ಳದೆ ಪತನಗೊಂಡಿತು. ಅಷ್ಟೇ ಅಲ್ಲ, ರಾಷ್ಟ್ರಗೀತೆ ಮೊಳಗುವ ಮುನ್ನವೇ ಯಡಿಯೂರಪ್ಪ ಸದನದಿಂದ ಹೊರಟರು. ಮೂರನೇ ಬಾರಿ ಮುಖ್ಯಮಂತ್ರಿ ಹುದ್ದೆಗೆ ಏರಿದ್ದ ಅವರ ಅಧಿಕಾರಾವಧಿ ಕೇವಲ 55 ಗಂಟೆಯಲ್ಲಿ ಕೊನೆಗೊಂಡಿತು.

ಇದನ್ನೂ ಓದಿ:ಇಂಥ ರಾಜಕೀಯ ಮಾಡಿ ನೀವು ಸಾಧಿಸಿದ್ದೇನು?

4ನೇ ಬಾರಿಗೆ ಸಿಎಂ ಗದ್ದುಗೆಗೆ ಬಿಎಸ್ವೈ

ಯಡಿಯೂರಪ್ಪ ಸರ್ಕಾರ ‘ವಿಶ್ವಾಸ’ಮತದ ಅಗ್ನಿಪರೀಕ್ಷೆಗೆ ಒಡ್ಡಿಕೊಳ್ಳದೆ ಪತನಗೊಂಡ ಬಳಿಕ, ಕಾಂಗ್ರೆಸ್–ಜೆಡಿಎಸ್ನ ಮೈತ್ರಿ ಸರ್ಕಾರ ರಚೆನೆಯಾಗಿ, ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಮೈತ್ರಿ ಪಕ್ಷಗಳ ಆಂತರಿಕ ಭಿನ್ನಮತದ ಹೊಗೆ ಬೆಂಕಿಯಾಗಿ ಹೊತ್ತಿಕೊಂಡ ಪರಿಣಾಮ ಶಾಸಕರು ಗುಂಪುಗುಂಪಾಗಿ ರಾಜೀನಾಮೆ ಸಲ್ಲಿಸಿದರು. ಮುಂಗಾರು ಅಧಿವೇಶನದಲ್ಲಿ ವಿಶ್ವಾಸಮತ ಪ್ರಸ್ತಾವ ಮಂಡಿಸಿದ್ದ ಕುಮಾರಸ್ವಾಮಿ, ಇದೇ ಜುಲೈ 23ರಂದು ವಿಶ್ವಾಸಮತಕ್ಕೆ ಹಾಕಿದರು. ಪ್ರಸ್ತಾವದ ಪರ 99, ವಿರುದ್ಧ 105ಮತಗಳು ಬಂದ ಕಾರಣ ಕುಮಾರಸ್ವಾಮಿ ನೇತೃತ್ವದ14 ತಿಂಗಳ ಮೈತ್ರಿ ಸರ್ಕಾರ ಬಿದ್ದುಹೋಯಿತು. ಈ ಅವಧಿಯಲ್ಲಿ ಯಡಿಯೂರಪ್ಪ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು.

ಮೈತ್ರಿ ಸರ್ಕಾರದಪತನಬಳಿಕ ಸರ್ಕಾರ ರಚನೆ ಉಮೇದಿನಲ್ಲಿದ್ದ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಪಕ್ಷದ ಹೈಕಮಾಂಡ್ ಎರಡು ದಿನ ಗ್ರೀನ್ ಸಿಗ್ನಲ್ ನೀಡದೆ,ಕಾದು ನೋಡುವ ತಂತ್ರ ಅನುಸರಿಸಿತ್ತು. ಗುರುವಾರ ತಡರಾತ್ರಿ ಅಮಿತ್ ಶಾ ಅವರನ್ನು ಒಪ್ಪಿಸುವಲ್ಲಿ ಯಶಸ್ವಿಯಾದ ಯಡಿಯೂರಪ್ಪಶುಕ್ರವಾರ ಬೆಳಿಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿ,ಸರ್ಕಾರ ರಚನೆಗೆ ಅವಕಾಶ ಕೊರಿದರು.

ಇದನ್ನೂ ಓದಿ: ಇನ್ನಾದರೂ ಕೊನೆಯಾದೀತೆ ರಾಜಕೀಯ ಅಸ್ಥಿರತೆ?

ಇದೇ ದಿನ (ಜುಲೈ 26) ಸಂಜೆ 6ಕ್ಕೆ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಪಾಲರು ಯಡಿಯೂರಪ್ಪ ಅವರಿಗೆ ಅವಕಾಶ ಕೊಟ್ಟಿದ್ದಾರೆ. ಈಗ ಬಿಜೆಪಿ ಪಾಳಯದಲ್ಲಿ ಉತ್ಸಾಹ ಗರಿಗೆದರಿದೆ.ಈ ಮಧ್ಯೆ ಗುರುವಾರ (ಜುಲೈ 25) ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಠಳ್ಳಿ (ಕಾಂಗ್ರೆಸ್), ಆರ್.ಶಂಕರ್ (ಪಕ್ಷೇತರ) ಅವರನ್ನುಸ್ಪೀಕರ್ ಕೆ.ಆರ್.ರಮೇಶ್ಕುಮಾರ್ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ರಾಜೀನಾಮೆ ನೀಡಿರುವ ಇತರ ಶಾಸಕರ ಭವಿಷ್ಯ ಮತ್ತು ನಡೆಯ ಮೇಲೆ ಈ ಬೆಳವಣಿಗೆಯ ಪರಿಣಾಮ ಯಡಿಯೂರಪ್ಪ ಅವರ ಭವಿಷ್ಯವನ್ನೂ ನಿರ್ಧರಿಸುತ್ತದೆ.

ಸರ್ಕಾರ ರಚನೆ ಮಾಡುವ ಉಮೇದಿನಲ್ಲಿರುವ ಬಿಜೆಪಿಯ ಎದುರು ಈಗಬಹುಮತ ಸಾಬೀತುಪಡಿಸುವ ಸವಾಲು ಇದೆ. ಪಳಗಿದ ರಾಜಕಾರಣಿ ಯಡಿಯೂರಪ್ಪ ಇದನ್ನು ಹೇಗೆ ಗೆಲ್ಲುತ್ತಾರೆ ಎಂಬುದು ಸದ್ಯದ ಕುತೂಹಲ.

ಇನ್ನಷ್ಟು...

ವ್ಯಂಗ್ಯಚಿತ್ರಗಳಲ್ಲಿ ಕಂಡ ಕಲಾಪ ಪ್ರಸಂಗ

ಸೌಧದಲ್ಲಿ ವಿಲವಿಲ, ಮೀಮ್ಗಳಲ್ಲಿ ಕಿಲಕಿಲ

‘ದೋಸ್ತಿ’ ಮನೆಗೆ: ಅಧಿಕಾರ ಬಿಎಸ್ವೈಗೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿ: ನೆಟ್ಟಿಗರ ಮನವಿ

ರೇವಣ್ಣನ ನಿಂಬೆಹಣ್ಣಿಗೆ ಯಾವುದೇ ಬೆಲೆ ಇಲ್ಲ: ಎ.ಮಂಜು

ಅಭಿವೃದ್ಧಿಯ ಹೊಸ ಪರ್ವ ಇಲ್ಲಿಂದ ಆರಂಭವಾಗುತ್ತೆ: ಯಡಿಯೂರಪ್ಪ ಭರವಸೆ

ವಿಶ್ವಾಸಮತ ನಿರ್ಣಯದ ಪರ 99, ವಿರುದ್ಧ 105: ಉರುಳಿತು ಮೈತ್ರಿ ಸರ್ಕಾರ

ಅತ್ಯಂತ ಸಂತೋಷದಿಂದ ನಾನು ಈ ಸ್ಥಾನ ತ್ಯಜಿಸುತ್ತೇನೆ: ಸದನದಲ್ಲಿ ಎಚ್ಡಿಕೆ ಮಾತು

ದೇವೇಗೌಡರ ಕುಟುಂಬಕ್ಕೆ ತುಮಕೂರು ಜನರ ಶಾಪ ತಟ್ಟಿದೆ: ಸಂಸದ ಬಸವರಾಜು

ಐಎಂಎ ಮನ್ಸೂರ್ಖಾನ್ನನ್ನು ಬಂಧಿಸಿದ್ದು ನಮ್ಮ ಎಸ್ಐಟಿ ಅಧಿಕಾರಿಗಳು: ಎಚ್ಡಿಕೆ

ರಾಜೀನಾಮೆ ಪತ್ರವನ್ನು ಯಡಿಯೂರಪ್ಪಗೆ ತೋರಿಸಿದ ಸ್ಪೀಕರ್ ರಮೇಶ್ಕುಮಾರ್

ಪಾಕ್ ಪ್ರಧಾನಿ ಜತೆ ಬಿರಿಯಾನಿ ತಿನ್ನುವವರು ನೀವು: ಬಿಜೆಪಿಗೆ ತಿವಿದ ಯು.ಟಿ.ಖಾದರ್

ಅತೃಪ್ತ ಶಾಸಕರ ಪರ ಸ್ಪೀಕರ್ ಭೇಟಿಯಾದ ವಕೀಲ ಅಶೋಕ್ ಹಾರನಹಳ್ಳಿ

ಸಿಎಂ ಕುಮಾರಸ್ವಾಮಿ ರಾಜೀನಾಮೆ ಪತ್ರ ನಕಲಿ? ಚರ್ಚೆಗೆ ಗ್ರಾಸ

ರಾಜೀನಾಮೆ ಕೊಡಲು ಹೇಳ್ರಿ: ಸಿಎಂ ವಿರುದ್ಧ ಸಿದ್ದರಾಮಯ್ಯ ಪರೋಕ್ಷ ಸಿಡಿ ಮಿಡಿ

ಬಿರಿಯಾನಿ ತಿನ್ನದಿದ್ದರೆ ಹೇಗೆ: ಮುಖ್ಯಮಂತ್ರಿಗೆ ಸಭಾಧ್ಯಕ್ಷರ ಪ್ರಶ್ನೆ

ರಾಜೀನಾಮೆ ಕೊಟ್ಟವರಿಗೂ ವಿಪ್ ಅನ್ವಯ; ಸ್ಪೀಕರ್ರೂಲಿಂಗ್

‘ಬಿಜೆಪಿ ಕೈಯಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯ ರಕ್ತ’

ದೇವರ ವರ: ಇಬ್ಬರು ಮುಖ್ಯಮಂತ್ರಿ–ಎಚ್ಡಿಕೆ–ಬಿಎಸ್ವೈಗೆ ದೇವರ ಹೂ ಪ್ರಸಾದ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೊ: ಸದನದಲ್ಲಿ ಕಣ್ಣೀರಿಟ್ಟ ಲಿಂಬಾವಳಿ

ಸುಪ್ರೀಂಕೋರ್ಟ್ ಅಂಗಳದಲ್ಲಿ ಕರ್ನಾಟಕ ರಾಜಕಾರಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.